ನವದೆಹಲಿ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದಿತ್ತು, ಅಲ್ಲದೆ ಆಸೀಸ್ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾದ ಮೊದಲ ನಾಯಕ ಎಂಬ ಕೀರ್ತಿಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದರು, ಆ ಸಾಧನೆಗೆ ಇಂದು ಎರಡನೇ ವರ್ಷದ ಸಂಭ್ರಮ.
ಕಳೆದ 2 ವರ್ಷಗಳ ಹಿಂದೆ ಅಂದರೆ 2019 ರ ಜನವರಿ 7 ರಂದು ಆಸ್ಟ್ರೇಲಿಯಾ ನೆಲದಲ್ಲಿ ಭಾರತ ಮೊದಲ ಟೆಸ್ಟ್ ಸರಣಿ ಗೆಲುವನ್ನು ದಾಖಲಿಸಿತು. ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಡ್ರಾ ಸಾಧಿಸುವ ಮೂಲಕ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತ್ತು.
-
#OnThisDay in 2019: 71 years since they first toured Australia, India finally had a series win to flaunt! 💪🏻
— KolkataKnightRiders (@KKRiders) January 7, 2021 " class="align-text-top noRightClick twitterSection" data="
Will #TeamIndia repeat the feat in the ongoing series? 🔥
📸- @CricketAus#KKR #AUSvIND #Test #Cricket pic.twitter.com/B83Of79cNQ
">#OnThisDay in 2019: 71 years since they first toured Australia, India finally had a series win to flaunt! 💪🏻
— KolkataKnightRiders (@KKRiders) January 7, 2021
Will #TeamIndia repeat the feat in the ongoing series? 🔥
📸- @CricketAus#KKR #AUSvIND #Test #Cricket pic.twitter.com/B83Of79cNQ#OnThisDay in 2019: 71 years since they first toured Australia, India finally had a series win to flaunt! 💪🏻
— KolkataKnightRiders (@KKRiders) January 7, 2021
Will #TeamIndia repeat the feat in the ongoing series? 🔥
📸- @CricketAus#KKR #AUSvIND #Test #Cricket pic.twitter.com/B83Of79cNQ
ನಾಲ್ಕು ಪಂದ್ಯಗಳ ಸರಣಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡ ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 31 ರನ್‌ಗಳಿಂದ ಗೆದ್ದರೆ, ಎರಡನೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಗೆಲುವು ಸಾಧಿಸಿತ್ತು.
ಮೆಲ್ಬೋರ್ನ್ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಭಾರತ ತಂಡ 137 ರನ್‌ಗಳಿಂದ ಜಯ ದಾಖಲಿಸಿತು. ನಂತರ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆದ ನಾಲ್ಕನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡ ಕಾರಣ, ಭಾರತ ತಂಡ ಕಾಂಗರೂಗಳ ನಾಡಲ್ಲಿ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಒಂದು ವರ್ಷ ನಿಷೇಧ ಶಿಕ್ಷೆಗೆ ಒಳಗಾಗಿದ್ದ ಡೇವಿಡ್ ವಾರ್ನರ್ ಹಾಗೂ ಸ್ಟೀವ್ ಸ್ಮಿತ್ ಆ ವರ್ಷ ನಡೆದ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿರಲಿಲ್ಲ.
ಪ್ರಸ್ತುತ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಈಗಾಗಲೆ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದು 1-1ರಲ್ಲಿ ಸಮಬಲ ಸಾಧಿಸಿದ್ದು, ಸಿಡ್ನಿ ಮೈದಾನದಲ್ಲಿ ಇಂದಿನಿಂದ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಿದೆ.