ಇಸ್ಲಾಮಾಬಾದ್: ಆಸ್ಟ್ರೇಲಿಯಾ ವಿರುದ್ಧ ಬ್ರಿಸ್ಬೇನ್ನಲ್ಲಿ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ನಸೀಮ್ ಶಾ ಇದೀಗ ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಅಂಡರ್-19 ವಿಶ್ವಕಪ್ ತಂಡದಲ್ಲಿ ಚಾನ್ಸ್ ಪಡೆದುಕೊಂಡಿದ್ದಾರೆ.
ಗಂಟೆಗೆ 140-150 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವ ಶಾ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಒಂದು ವಿಕೆಟ್ ಪಡೆದುಕೊಂಡಿದ್ದರು. ಆದರೆ ಶಾ ವಯಸ್ಸಿನ ಬಗ್ಗೆ ಕ್ರಿಕೆಟ್ ಲೋಕದಲ್ಲಿ ಸಾಕಷ್ಟು ಚರ್ಚೆಗಳು ಆರಂಭವಾಗಿ, ಹಲವರು ಅನುಮಾನ ವ್ಯಕ್ತಪಡಿಸಿದ್ದರು.
2016ರಲ್ಲಿ 16 ವರ್ಷದವನಾಗಿದ್ದ ನಸೀಮ್, 2018ರಲ್ಲಿ 17 ವರ್ಷ ಹಾಗೂ 2019ರಲ್ಲಿ ಅವರ ವಯಸ್ಸು 16 ಎಂದು ಹೇಳಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಅಂಡರ್-19 ವಿಶ್ವಕಪ್ನಲ್ಲಿ ಅವರಿಗೆ ಅವಕಾಶ ನೀಡಲಾಗಿದ್ದು, ಬೌಲಿಂಗ್ ವಿಭಾಗದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಅವರು ಆಯ್ಕೆಯಾಗಿರುವ ಬಗ್ಗೆ ಪಾಕಿಸ್ತಾನ ಜೂನಿಯರ್ ತಂಡದ ಮುಖ್ಯ ಕೋಚ್ ಇಜಾಝ್ ಅಹ್ಮದ್ ಹೇಳಿಕೆ ನೀಡಿದ್ದು, ಈಗಾಗಲೇ ರಾಷ್ಟ್ರೀಯ ಕ್ರಿಕೆಟ್ ತಂಡದಿಂದ ರಿಲೀಸ್ ಮಾಡುವಂತೆ ಮನವಿ ಸಹ ಮಾಡಿದ್ದಾರೆ.
ಪಾಕ್ ತಂಡ ಇಂತಿದೆ:
ರೋಹೈಲ್ ನಜೀರ್ (ಕ್ಯಾಪ್ಟನ್ /ವಿ.ಕೀ), ವಾಹಿದ್ ಬಂಗಲ್ಜೈ, ಹೈದರ್ ಅಲಿ, ಮೊಹಮ್ಮದ್ ಶಹಜಾದ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ಹುರೈರಾ, ಮೊಹಮ್ಮದ್ ಇರ್ಫಾನ್ ಖಾನ್, ಅಬ್ಬಾಸ್ ಅಫ್ರಿದಿ, ಫಹರ್ ಮುನೀರ್, ಖಾಸಿಮ್ ಅಕ್ರಮ್, ಅಮೀರ್ ಅಲಿ, ಆರಿಶ್ ಅಲಿ ಖಾನ್, ಅಮೀರ್ ಖಾನ್, ನಸೀಮ್ ಶಾ, ತಾಹ್ ಹುಸೇನ್.