ಇಸ್ಲಮಾಬಾದ್: ಪಾಕಿಸ್ತಾನ ತಂಡದ ಕ್ರಿಕೆಟ್ ಆಟಗಾರ ಫವಾದ್ ಆಲಂ 10 ವರ್ಷಗಳ ನಂತರ ಮತ್ತೆ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದು ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ಮುಂದಿನ ವಾರದಿಂದ ಆರಂಭವಾಗಲಿರುವ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವಿನ ಐತಿಹಾಸಿಕ ಟೆಸ್ಟ್ ಸರಣಿಗೆ ಫವಾದ್ ಆಲಂ ಅವರನ್ನ ಆಯ್ಕೆಮಾಡಲಾಗಿದ್ದು, ರಾಲ್ಪಿಂಡಿಯಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಕೋಚ್ ಹಾಗೂ ಆಯ್ಕೆದಾರ ಮಿಸ್ಬಾ-ಉಲ್-ಹಕ್, ಎಡಗೈ ಬ್ಯಾಟ್ಸ್ಮನ್ ಫವಾದ್ ,10 ವರ್ಷಗಳ ಬಳಿಕ ತಂಡಕ್ಕೆ ವಾಪಾಸ್ ಆಗಿದ್ದಾರೆ. ಇತ್ತೀಚೆಗಿನ ದೇಶೀ ಟೂರ್ನಿಯಲ್ಲಿ ಫವಾದ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಆಯ್ಕೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಫವಾದ್ ಕೊನೆಯದಾಗಿ 2009ರಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಂಡಿದ್ದರು, ಅಲ್ಲಿಂದ ಇಲ್ಲಿಯವರೆಗೆ ತಂಡಕ್ಕೆ ಆಯ್ಕೆಯಾಗುವಲ್ಲಿ ವಿಫಲರಾಗಿದ್ದರು.