ಅಹ್ಮದಾಬಾದ್: ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ನಾಮಕರಣ ಮಾಡಲಾಗಿದೆ. ಇಂದು ಅತಿದೊಡ್ಡ ಕ್ರೀಡಾಂಗಣವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟನೆ ಮಾಡಿದ್ದರು.
ಇದನ್ನು ಈ ಮೊದಲು ಮೊಟೆರಾ ಕ್ರೀಡಾಂಗಣ ಎಂದೇ ಕರೆಯಲಾಗುತ್ತಿತ್ತು. ಇದೀಗ ಆ ಕ್ರೀಡಾಂಗಣಕ್ಕೆ ‘ನರೇಂದ್ರ ಮೋದಿ ಕ್ರೀಡಾಂಗಣ’ ಎಂದು ನಾಮಕರಣ ಮಾಡಲಾಗಿದೆ.
ನೂತನ ಕೀಡಾಂಗಣ ಉದ್ಘಾಟನಾ ಸಮಾರಂಭದಲ್ಲಿ ಗೃಹ ಸಚಿವ ಅಮಿತ್ ಶಾ, ಗುಜರಾತ್ ಗವರ್ನರ್ ಆಚಾರ್ಯ ದೇವರತ್, ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜಿಜು, ಬಿಸಿಸಿಐ ಸೆಕ್ರೆಟರಿ ಜಯ್ ಶಾ ಉಪಸ್ಥಿತರಿದ್ದರು. ಗೃಹ ಸಚಿವ ಅಮಿತ್ ಶಾ ಅಧಿಕೃತವಾಗಿ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಘೋಷಿಸಿದರು.
ಇದನ್ನೂ ಓದಿ: ಮೊಟೆರಾದ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಮೈದಾನ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ