ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ನ ತರಬೇತುದಾರನಾಗಿ ಮತ್ತೊಂದು ಅವಧಿಗೆ ರವಿಶಾಸ್ತ್ರಿ ಆಯ್ಕೆಯಾಗಿದ್ದು, 2021ರ ಐಸಿಸಿ ಟಿ20 ವಿಶ್ವಕಪ್ವರೆಗೂ ಈ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.
ಕೋಚ್ ಆಯ್ಕೆ ವಿಷಯವಾಗಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಮಾತನಾಡಿದ್ದಾರೆ. ರವಿಶಾಸ್ತ್ರಿ ಕೋಚ್ ಸ್ಥಾನಕ್ಕೆ ಸರಿಯಾದ ಆಯ್ಕೆ. ಈ ಸಲದ ಕೋಚ್ ಹುದ್ದೆಗೆ ಹೇಳಿಕೊಳ್ಳುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರಲಿಲ್ಲ. ಹೀಗಾಗಿ ಅವರನ್ನೇ ಕೋಚ್ ಆಗಿ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿತ್ತು ಎಂದು ಹೇಳಿದ್ರು.
ರವಿಶಾಸ್ತ್ರಿ ಮುಂದೆ ಎರಡು ಮಹತ್ವದ ಜವಾಬ್ದಾರಿಗಳಿವೆ. 2020ರ ಐಸಿಸಿ ಟಿ-20 ವಿಶ್ವಕಪ್ ಹಾಗೂ 2021ರಲ್ಲಿ ನಡೆಯುವ ಐಸಿಸಿ ಚಾಂಪಿಯನ್ ಟೂರ್ನಿ. ಈ ಎರಡೂ ಟೂರ್ನಿಗಳಲ್ಲಿ ಭಾರತ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಿ, ಕಪ್ ಗೆಲ್ಲುವಂತೆ ಮಾಡಬೇಕು ಎಂದು ರವಿಶಾಸ್ತ್ರಿ ಅವರಿಗೆ ಕಿವಿಮಾತು ಹೇಳಿದ್ರು.
2016ರಲ್ಲಿ ಅನಿಲ್ ಕುಂಬ್ಳೆ ಭಾರತ ತಂಡದ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರವಿಶಾಸ್ತ್ರಿ ಆ ಸ್ಥಾನ ತುಂಬಿದ್ದು ಎರಡನೇ ಅವಧಿಗೂ ಅವರನ್ನೇ ಕೋಚ್ ಆಗಿ ಮುಂದುವರಿಸಲಾಗಿದೆ. ಶಾಸ್ತ್ರಿ ನೇತೃತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡುತ್ತಿದ್ದು, ವಿದೇಶಗಳಲ್ಲಿ ನಡೆಯುವ ಸರಣಿಗಳಲ್ಲೂ ಗೆಲುವು ಸಾಧಿಸುತ್ತಿದೆ.