ETV Bharat / sports

ಮತ್ತೊಂದು ದಾಖಲೆ ಬರೆದ ರೋಹಿತ್.. ಈ ಸಾಧನೆ ಮಾಡಿದ ಭಾರತದ 3ನೇ ಆಟಗಾರ! - ಟಾಪ್ 10 ಪಟ್ಟಿಯಲ್ಲಿ ರೋಹಿತ್

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿರುವ ಹಿಟ್ ಮ್ಯಾನ್ ಟೆಸ್ಟ್​ ಕ್ರಿಕೆಟ್​ನ ರ‍್ಯಾಂಕಿಂಗ್ ಪಟ್ಟಿಯಲ್ಲಿ 2 ಸ್ಥಾನ ಏರಿಕೆ ಕಂಡಿದ್ದಾರೆ.

ರೋಹಿತ್ ಶರ್ಮಾ
author img

By

Published : Oct 23, 2019, 5:25 PM IST

Updated : Oct 23, 2019, 6:37 PM IST

ಹೈದರಾಬಾದ್: ಹಿಟ್​ ಮ್ಯಾನ್ ಎಂದೇ ಖ್ಯಾತಿಯಾಗಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್ ಶರ್ಮಾ ವಿಶ್ವಕ್ರಿಕೆಟ್​ನ ಮೂರು ವಿಭಾಗಗಳಲ್ಲೂ ಟಾಪ್ 10 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

Rohit Sharma
ರೋಹಿತ್ ಶರ್ಮಾ

ಏಕದಿನ ಮತ್ತು ಟಿ-20 ಕ್ರಿಕೆಟ್​ನಲ್ಲಿ ಹಲವು ದಾಖಲೆ ಬರೆದಿರುವ ರೋಹಿತ್​ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಮೊದಲ ಪಂದ್ಯದ ಎರಡೂ ಇನ್ನಿಂಗ್ಸ್​ಗಳಲ್ಲಿ ಶತಕ ಸಿಡಿಸಿದ್ದರು. ಮೂರನೇ ಟೆಸ್ಟ್​ ಪಂದ್ಯದಲ್ಲಿ ಅಬ್ಬರಿಸಿದ್ದ ರೋಹಿತ್ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದರು. ಮೂರು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಒಟ್ಟು 529 ರನ್​ ಗಳಿಸಿದ ರೋಹಿತ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.

Rohit Sharma
ರೋಹಿತ್ ಶರ್ಮಾ

ಆಫ್ರಿಕನ್ನರ ವಿರುದ್ಧ ಉತ್ತಮ ಪ್ರದರ್ಶನ ತೋರಿದ ರೋಹಿತ್ ಶರ್ಮಾ ಐಸಿಸಿ ಟೆಸ್ಟ್​ ರ‍್ಯಾಂಕಿಂಗ್​ನಲ್ಲಿ 12 ಸ್ಥಾನ ಏರಿಕೆ ಕಂಡು 22 ರಿಂದ 10ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಈಗಾಗಲೆ ಏಕದಿನ ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನದಲ್ಲಿರುವ ರೋಹಿತ್, ಟಿ - 20 ರ‍್ಯಾಂಕಿಂಗ್ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದಾರೆ. ಈ ಮೂಲಕ ಕ್ರಿಕೆಟ್​ನ ಮೂರು ಫಾರ್ಮೆಟ್​ನಲ್ಲೂ ಟಾಪ್ 10 ಪಟ್ಟಿಲ್ಲಿ ಕಾಣಿಸಿಕೊಂಡ ಭಾರತದ 3ನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಈಗಾಗಲೆ ಮೂರು ಫಾರ್ಮೆಟ್​ನಲ್ಲೂ ಟಾಪ್ 10 ಪಟ್ಟಿಯಲ್ಲಿದ್ದಾರೆ. ಈ ಹಿಂದೆ ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್​ ಗಂಭೀರ್ ಕೂಡ ಮೂರು ಫಾರ್ಮೆಟ್​ನಲ್ಲೂ 10 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದರು.

Intro:Body:Conclusion:
Last Updated : Oct 23, 2019, 6:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.