ಕಟಕ್(ಒಡಿಶಾ): ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ 2019ರಲ್ಲಿ ಅದ್ಭುತ ಫಾರ್ಮ್ನಲ್ಲಿದ್ದು ಈಗಾಗಲೇ ಅತಿ ಹೆಚ್ಚು ರನ್, ಅತಿ ಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
ವಿಂಡೀಸ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಫೈನಲ್ ಪಂದ್ಯದಲ್ಲಿ ಕೇವಲ 9 ರನ್ ಗಳಿಸುತ್ತಿದ್ದಂತೆ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವರ್ಷವೊಂದರಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆರಂಭಿಕ ಬ್ಯಾಟ್ಸ್ಮನ್ ಎಂಬ ದಾಖಲೆಗೆ ಪಾತ್ರರಾದರು. ಈ ಮೂಲಕ 22 ವರ್ಷಗಳ ಹಿಂದೆ ಶ್ರೀಲಂಕಾದ ಸನತ್ ಜಯಸೂರ್ಯ ಅವರ ಹೆಸರಿನಲ್ಲಿರುವ ದಾಖಲೆಯನ್ನು ಅಳಿಸಿ ಹಾಕಿದ್ರು.
ಶ್ರೀಲಂಕಾದ ಆರಂಭಿಕ ಆಟಗಾರನಾಗಿ ಸನತ್ ಜಯಸೂರ್ಯ 1977ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ನಿಂದ 2,387 ರನ್ ಗಳಿಸಿ ವಿಶ್ವದಾಖಲೆ ನಿರ್ಮಿಸಿದ್ದರು. ಇದೀಗ ರೋಹಿತ್ ಶರ್ಮಾ 9 ರನ್ಗಳಿಸುತ್ತಿದ್ದಂತೆ 22 ವರ್ಷಗಳ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ. ಜೊತೆಗೆ ಪ್ರಸ್ತುತ ವರ್ಷದಲ್ಲಿ ಏಕದಿನ ಕ್ರಿಕೆಟ್‌ನಲ್ಲಿ 1,427, ಟಿ20 ಯಲ್ಲಿ 396, ಟೆಸ್ಟ್ನಲ್ಲಿ 556 ರನ್ ಗಳಿಸಿದ್ದಾರೆ.
ಇನ್ನು ವರ್ಷವೊಂದರಲ್ಲಿ ಅತಿ ಹೆಚ್ಚು ರನ್ಗಳಿಸಿದ (ಯಾವುದೇ ಕ್ರಮಾಂಕದಲ್ಲಿ) ವಿಶ್ವದಾಖಲೆ ಶ್ರೀಲಂಕಾದ ಕುಮಾರ್ ಸಂಗಕ್ಕಾರ ಅವರ ಹೆಸರಿನಲ್ಲಿದೆ. ಅವರು 2014ರಲ್ಲಿ 2,868 ರನ್ಗಳಿಸಿದ್ದರು.