ಮುಂಬೈ: ಭಾರತ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಕ್ರಿಕೆಟ್ ಇಲ್ಲದೆ ಬೇಸರದಲ್ಲಿದ್ದಾರೆ. ಕಳೆದ ಮೂರು ತಿಂಗಳಿನಿಂದ ಕೊರೊನಾ ಭೀತಿಯಿಂದ ಕ್ರಿಕೆಟ್ ಸ್ಥಗಿತಗೊಂಡಿರುವುದರಿಂದ ಸಿಕ್ಸರ್ ಸಿಡಿಸುವುದನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಅವರು ಇನ್ಸ್ಟಾಗ್ರಾಮ್ನಲ್ಲಿ ಹೇಳಿಕೊಂಡಿದ್ದಾರೆ.
ಕಳೆದ ವಿಶ್ವಕಪ್ನಿಂದಲೂ ಅದ್ಭುತ ಫಾರ್ಮ್ನಲ್ಲಿದ್ದ ಶರ್ಮಾ, ಐಪಿಎಲ್ನಲ್ಲಿ ಬೌಂಡರಿ, ಸಿಕ್ಸರ್ಗಳ ಸುರಿಮಳೆ ಸುರಿಸುತ್ತಾರೆ ಎಂಬ ನಿರೀಕ್ಷೆಯಲ್ಲಿ ಭಾರತೀಯರಿದ್ದರು. ಆದರೆ ಮಹಾಮಾರಿ ಕೊರೊನಾ ಅಭಿಮಾನಿಗಳ ನಿರೀಕ್ಷೆ ಹುಸಿಗೊಳಿಸಿದೆ.
- " class="align-text-top noRightClick twitterSection" data="
">
ಮನೆಯಲ್ಲಿ ಕುಟುಂಬದ ಜೊತೆ ಕಾಲಕಳೆಯುತ್ತಿರುವ ರೋ'ಹಿಟ್', ಶನಿವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಚೆಂಡನ್ನು ಸಿಕ್ಸರ್ಗಟ್ಟುವ ವಿಡಿಯೋ ಹಂಚಿಕೊಂಡಿದ್ದಾರೆ. ಅದೇ ವಿಡಿಯೋಗೆ ಹೀಗೆ ಆಡುವುದನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಭಾರತದ ಪರ ಅತಿ ಹೆಚ್ಚು ಸಿಕ್ಸರ್ ಸಿಡಿಸಿರುವ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲೂ ಅತಿ ಹೆಚ್ಚು ಸಿಕ್ಸರ್ ಸಿಡಿಸಿರುವ ಬ್ಯಾಟ್ಸ್ಮನ್ ಕೂಡಾ ಹೌದು. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ರೋಹಿತ್ (423) ಮೂರನೇ ಸ್ಥಾನದಲ್ಲಿದ್ದರೆ, ಮೊದಲ ಸ್ಥಾನದಲ್ಲಿ ವಿಂಡೀಸ್ ತಂಡದ ಕ್ರಿಸ್ ಗೇಲ್ (534) ಹಾಗೂ ಪಾಕಿಸ್ತಾನದ ಶಾಹೀದ್ ಅಫ್ರಿದಿ (467) ಎರಡನೇ ಸ್ಥಾನದಲ್ಲಿದ್ದಾರೆ.