ಹೈದರಾಬಾದ್: ಗಾಯದ ಕಾರಣದಿಂದಾಗಿ ಆಸೀಸ್ ವಿರುದ್ಧದ ಸೀಮಿತ ಓವರ್ಗಳ ಸರಣಿ ಮಿಸ್ ಮಾಡಿಕೊಂಡಿದ್ದ ಹಿಟ್ಮ್ಯಾನ್ ರೋಹಿತ್ ಶರ್ಮಾ, ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿತ್ತಾರೋ ಇಲ್ಲವೋ ಎಂಬುದು ಇಂದು ತಿಳಿಯಲಿದೆ.
ಡಿಸೆಂಬರ್ 11ರಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ರೋಹಿತ್ ಶರ್ಮಾ ಅವರ ಗಾಯದ ಪ್ರಮಾಣ ನಿರ್ಣಯಿಸಲಾಗುವುದು ಎಂದು ಈ ಹಿಂದೆ ಬಿಸಿಸಿಐ ಮಾಹಿತಿ ನೀಡಿತ್ತು. ಅದರಂತೆ ಇಂದು ರೋಹಿತ್ ಶರ್ಮಾ ಅವರು ಪರೀಕ್ಷೆಗೆ ಒಳಗಾಗಲಿದ್ದಾರೆ.
ಆಸೀಸ್ ವಿರುದ್ಧದ ಸರಣಿಗೂ ಮುನ್ನ ಮಾಹಿತಿ ನೀಡಿದ್ದ ವಿರಾಟ್ ಕೊಹ್ಲಿ, ಡಿಸೆಂಬರ್ 11ರಂದು ಮೌಲ್ಯಮಾಪನ ನಡಿಸಿದ ಬಳಿಕವಷ್ಟೆ ರೋಹಿತ್ ಶರ್ಮಾ, ಆಸೀಸ್ ವಿರುದ್ಧ ಕಣಕ್ಕಿಳಿಯುತ್ತಾರೋ ಇಲ್ಲವೋ ಎಂಬದರ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದಿದ್ದರು.
ಇಂದು ನಡೆಯುವ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆದರೆ ಮಾತ್ರ ರೋಹಿತ್ ಶರ್ಮಾ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲಿದ್ದಾರೆ. ಆದರೆ ಆಸ್ಟ್ರೇಲಿಯಾ ತಲುಪಿದ ಬಳಿಕ 14 ದಿನಗಳ ಕ್ವಾರಂಟೈನ್ ನಿಯಮ ಪಾಲಿಸಬೇಕಿರುತ್ತದೆ. ಹೀಗಾಗಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿರುವ ಮೊದಲ ಪಂದ್ಯಕ್ಕೆ ಲಭ್ಯವಾಗುವುದು ಅನುಮಾನವಾಗಿದೆ.