ರಾಂಚಿ: ಭಾರತಕ್ಕೆ ಎರಡು ವಿಶ್ವಕಪ್ ಕ್ರಿಕೆಟ್ ಗೆದ್ದುಕೊಟ್ಟ ಮಾಜಿ ನಾಯಕ ಎಂ.ಎಸ್ ಧೋನಿ ಅವರ ಮನೆಗೆ ಸುಮಾರು 5 ಗಂಟೆಗಳ ಕಾಲ ವಿದ್ಯುತ್ ಕಡಿತಗೊಂಡ ಘಟನೆ ನಡೆದಿದೆ.
ಗುರುವಾರ ಏಕಾಏಕಿ ವಿದ್ಯುತ್ ಕಡಿತದ ಬಗ್ಗೆ ಧೋನಿ ಪತ್ನಿ ಸಾಕ್ಷಿ ಅವರು ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಬಹುತೇಕ ನೆಟ್ಟಿಗರು ಸಾಕ್ಷಿ ಅವರಿಗೆ ಬೆಂಬಲ ಸೂಚಿಸಿದ್ದು, ಈ ಟ್ವೀಟ್ ಅನ್ನು ಜಾರ್ಖಂಡ್ ಮುಖ್ಯಮಂತ್ರಿ ಅವರಿಗೆ ಟ್ಯಾಗ್ ಮಾಡಿದ್ದಾರೆ.
'ಜಾರ್ಖಂಡ್ನ ಜನರು ನಿತ್ಯ ವಿದ್ಯುತ್ ಕಡಿತದ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರತಿ ದಿನ ಸುಮಾರು 4ರಿಂದ 7 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಸೆಪ್ಟೆಂಬರ್ 19ರಂದು ಐದು ಗಂಟೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಾರೆ ಎಂಬ ಭರವಸೆ ಇದೆ' ಎಂದು ಬರೆದುಕೊಂಡಿದ್ದಾರೆ.
-
#ranchi pic.twitter.com/OgzMHoU9OK
— Sakshi Singh 🇮🇳❤️ (@SaakshiSRawat) September 19, 2019 " class="align-text-top noRightClick twitterSection" data="
">#ranchi pic.twitter.com/OgzMHoU9OK
— Sakshi Singh 🇮🇳❤️ (@SaakshiSRawat) September 19, 2019#ranchi pic.twitter.com/OgzMHoU9OK
— Sakshi Singh 🇮🇳❤️ (@SaakshiSRawat) September 19, 2019