ಆಲೂರು: ಕೇರಳ ಕ್ರಿಕೆಟಿಗ ಸಂಜು ಸಾಮ್ಸನ್ ವಿಜಯ ಹಜಾರೆ ಟ್ರೋಫಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ್ದು, ಗೋವಾ ವಿರುದ್ಧ ದ್ವಿಶತಕ ಸಿಡಿಸಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೇರಳ ತಂಡದ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದಿದ್ದ ಸಂಜು ಸಾಮ್ಸನ್ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 68ನೇ ಎಸೆತದಲ್ಲಿ ಶತಕ ಸಿಡಿಸಿದ ಸಂಜು 125 ನೇ ಎಸೆತದಲ್ಲಿ ದ್ವಿಶತಕ ಸಾಧನೆ ಮಾಡಿದರು.
ಭಾರತ ತಂಡದಲ್ಲಿ ವಿಕೆಟ್ ಕೀಪರ್ ಸ್ಥಾನಕ್ಕೆ ಸಂಜು ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ 50 ಓವರ್ಗಳ ಪಂದ್ಯದಲ್ಲಿ ಸಂಜು ಸಾಮ್ಸನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿರುವುದು ರಿಷಭ್ ಪಂತ್ಗೆ ತಲೆ ನೋವು ತಂದಿದೆ.
129 ಎಸೆತಗಳನ್ನೆದುರಿಸಿರುವ ಸಂಜು ಸಾಮ್ಸನ್ 21 ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್ ಸೇರಿದಂತೆ 212 ರನ್ಗಳಿಸಿ ಔಟಾಗದೇ ಉಳಿದಿದ್ದಾರೆ. ಇವರಿಗೆ ಸಾತ್ ನೀಡಿದ ಸಚಿನ್ ಬೇಬಿ 135 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 7 ಬೌಂಡರಿ ಸೇರಿದಂತೆ 127 ರನ್ಗಳಿಸಿ ಬೃಹತ್ ಮೊತ್ತಕ್ಕೆ ಕಾರಣರಾಗಿದರು.
ಒಟ್ಟಾರೆ 50 ಓವರ್ಗಳಲ್ಲಿ ಕೇರಳ 3 ವಿಕೆಟ್ ಕಳೆದುಕೊಂಡು 372 ರನ್ಗಳಿಸಿದೆ. ಸಂಜು ಸಾಮ್ಸನ್ 212 ರನ್ಗಳಿಸುವ ಮೂಲಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್ಮನ್ ಹಾಗೂ ಲಿಸ್ಟ್ ಎ ಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿದ ಭಾರತದ 6ನೇ ಬ್ಯಾಟ್ಸ್ಮನ್ ಎನಿಸಿಕೊಂಡರು.