ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಸರಣಿ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ವರದಿಗಳು ಬಂದ ನಂತರ ಮುಂದಿನ ಚಿಕಿತ್ಸೆ ಬಗ್ಗೆ ನಿರ್ದಾರ ತೆಗೆದುಕೊಳ್ಳಲಾಗುವುದು ಎಂದು ದಾದಾ ದಾಖಲಾಗಿರುವ ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಬುಧವಾರ 2ನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಇಂದು ಆ್ಯಂಜಿಯೋಗ್ರಫಿಗೆ ಒಳಗಾಗುವ ಸಾಧ್ಯತೆಯಿದ್ದು, ಮತ್ತೊಂದು ಸ್ಟಂಟ್ ಅಳವಡಿಕೆ ಅಗತ್ಯವಿದೆಯೇ ಎಂದು ವೈದ್ಯರು ಕೆಲವು ಪರೀಕ್ಷೆಗಳ ನಂತರ ನಿರ್ಧರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಜನವರಿಯ ಆರಂಭದಲ್ಲಿ ಲಘು ಹೃದಯಾಘಾತಕ್ಕೆ ಒಳಗಾಗಿದ್ದ ಗಂಗೂಲಿ ವುಡ್ಲ್ಯಾಂಡ್ ಆಸ್ಪತ್ರೆಯಲ್ಲಿ ಆಂಜಿಯೊಪ್ಲಾಸ್ಟಿಗೆ ಒಳಗಾಗಿದ್ದು, ಅವರ ಅಭಿದಮನಿಯಲ್ಲಿ ಸ್ಟಂಟ್ ಅಳವಡಿಸಲಾಗಿತ್ತು.
"ಗಂಗೂಲಿಯವರು ರಾತ್ರಿ ತುಂಬಾ ಚೆನ್ನಾಗಿ ನಿದ್ದೆ ಮಾಡಿದ್ದಾರೆ. ಅವರು ಇಂದು ಬೆಳಗ್ಗೆ ಸ್ವಲ್ಪ ಲಘು ಉಪಹಾರ ಸೇವಿಸಿದ್ದಾರೆ. ಇಂದು ಅವರಿಗೆ ಹಲವು ಪರೀಕ್ಷೆಗಳನ್ನು ಮಾಡಲಿದ್ದೇವೆ. ನಂತರ ಅವರ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ" ಎಂದು ಕ್ರಿಕೆಟ್ ಐಕಾನ್ರ ಆರೋಗ್ಯ ನೋಡಿಕೊಳ್ಳುತ್ತಿರುವ ತಂಡದ ವೈದ್ಯರೊಬ್ಬರು ತಿಳಿಸಿದ್ದಾರೆ.
" ಪರೀಕ್ಷಾ ಫಲಿತಾಂಶಗಳು ಬಂದ ನಂತರ ಅವರ ಅಪಧಮನಿಗಳಲ್ಲಿನ ಬ್ಲಾಕ್ಗಳನ್ನು ತೆರೆಯಲು ಎರಡು ಸ್ಟಂಟ್‌ಗಳನ್ನು ಅಳವಡಿಸಲು ಸಾಧ್ಯವಾಗುತ್ತದೆ " ಎಂದು ಅವರು ಹೇಳಿದ್ದಾರೆ.
ಇದನ್ನು ಓದಿ:ಡಾ. ದೇವಿ ಶೆಟ್ಟಿ ಸಮ್ಮುಖದಲ್ಲಿ ಸೌರವ್ ಗಂಗೂಲಿಗೆ ನಾಳೆ ಸ್ಟಂಟ್ ಅಳವಡಿಕೆ