ಅಹ್ಮದಾಬಾದ್: ಫಾಸ್ಟ್ ಬೌಲರ್ ಉಮೇಶ್ ಯಾದವ್ ಫಿಟ್ನೆಸ್ಟ್ ಪಾಸ್ ಮಾಡಿದ್ದು, ಇಂಗ್ಲೆಂಡ್ ವಿರುದ್ಧದ ಕೊನೆಯ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ತಂಡ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಸೋಮವಾರ ತಿಳಿಸಿದೆ.
ಭಾರತ ತಂಡದ ವೇಗದ ಬೌಲರ್ ಉಮೇಶ್ ಯಾದವ್, ಫೆಬ್ರವರಿ 21ರಂದು ಮೊಟೆರಾದಲ್ಲಿ ಫಿಟ್ನೆಸ್ಟ್ಗೆ ಒಳಗಾಗಿದ್ದರು. ಫಿಟ್ನೆಸ್ಟ್ ಟೆಸ್ಟ್ನಲ್ಲಿ ಪಾಸ್ ಆಗಿರುವ ಅವರು ಪ್ರಸ್ತುತ ನಡೆಯುತ್ತಿರುವ ಟೆಸ್ಟ್ ಸರಣಿಯ ಕೊನೆಯ 2 ಪಂದ್ಯಗಳಿಗಾಗಿ ಭಾರತ ತಂಡ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ಹೊರಡಿಸಿದೆ.
ಮೊದಲೆರಡು ತಂಡಗಳಲ್ಲಿ ಅವಕಾಶ ಪಡೆದಿದ್ದ ಶಾರ್ದುಲ್ ಠಾಕೂರ್ ಅವರನ್ನು ವಿಜಯ್ ಹಜಾರೆ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಬಿಡುಗಡೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
4 ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ತಲಾ ಒಂದು ಪಂದ್ಯ ಗೆದ್ದು ಸರಣಿಯನ್ನು 1-1ರಲ್ಲಿ ಸಮಬಲ ಸಾಧಿಸಿವೆ.
ಕೊನೆಯ ಎರಡು ಟೆಸ್ಟ್ ಪಂದ್ಯಗಳ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್) , ಆರ್ ಅಶ್ವಿನ್, ಕುಲ್ದೀಪ್ ಯಾದವ್, ಆಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್
ಇದನ್ನು ಓದಿ:ಧೋನಿ ಟೆಸ್ಟ್ ನಾಯಕತ್ವದ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ವಿರಾಟ್