ಹೈದರಾಬಾದ್: ಆ್ಯಶಸ್ ಸರಣಿಯಲ್ಲಿ ಅಬ್ಬರದ ಬ್ಯಾಟಿಂಗ್ ಮೂಲಕ ಟೆಸ್ಟ್ ಕ್ರಿಕೆಟ್ ಶ್ರೇಯಾಂಕದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಿಂದಿಕ್ಕಿ ಮತ್ತೆ ನಂ. 1 ಸ್ಥಾನಕ್ಕೇರಿರುವ ಆಸೀಸ್ ಮಾಜಿ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಬಗ್ಗೆ ಕ್ರಿಕೆಟ್ ದಿಗ್ಗಜರಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಮಾತನಾಡಿರುವ ಆಸೀಸ್ ಸ್ಪಿನ್ ದಂತಕಥೆ ಶೇನ್ ವಾರ್ನ್, ಸ್ಮಿತ್ ಬ್ಯಾಟಿಂಗ್ ಪ್ರದರ್ಶನವನ್ನು ಹಾಡಿಹೊಗಳಿದ್ದಾರೆ. ಸ್ಮಿತ್ ಹಾಗೂ ವಿರಾಟ್ ಕೊಹ್ಲಿ ನಡುವಿನ ಸಾಮ್ಯತೆ ಹಾಗೂ ಭಿನ್ನತೆ ಬಗ್ಗೆಯೂ ಪ್ರತಿಕ್ರಿಯಿಸಿರುವ ವಾರ್ನ್, ಟೆಸ್ಟ್ ಕ್ರಿಕೆಟ್ನಲ್ಲಿ ಸ್ಟೀವ್ ಅತ್ಯುತ್ತಮ ಆಟಗಾರ. ಹಾಗೆಯೇ ಮೂರು ಮಾದರಿಯ ಕ್ರಿಕೆಟ್ನಲ್ಲಿ ಪ್ರದರ್ಶನವನ್ನು ಉಲ್ಲೇಖಿಸಿದರೆ, ವಿರಾಟ್ ಕೊಹ್ಲಿ ಅಗ್ರಗಣ್ಯರಾಗಿದ್ದಾರೆ ಎಂದಿದ್ದಾರೆ.
ಈ ಹಿಂದೆ ನೋಡಿದಂತೆ ನನ್ನ ಪ್ರಕಾರ ವೆಸ್ಟ್ ಇಂಡೀಸ್ನ ದಿಗ್ಗಜ ವಿವ್ ರಿಚರ್ಡಸನ್ ಏಕದಿನ ಕ್ರಿಕೆಟ್ನಲ್ಲಿ ಅತ್ಯುತ್ತಮ ಆಟಗಾರರಾಗಿದ್ದರು. ಆದರೆ ಇಂದು ಸ್ಥಿರ ಪ್ರದರ್ಶನದ ಮೂಲಕ ರಿಚರ್ಡಸನ್ ಅವರನ್ನು ಹಿಂದಿಕ್ಕಿರುವ ವಿರಾಟ್ ಕೊಹ್ಲಿಯೇ ಅತ್ಯುತ್ತಮ ಆಟಗಾರ ಎಂಬುದನ್ನು ಸಾಬೀತುಪಡಿಸಿದ್ದಾರೆ. ವಿರಾಟ್ ಎಲ್ಲ ದಾಖಲೆಗಳನ್ನು ಮುರಿಯುವ ಸಾಧ್ಯತೆ ಇದೆ. ನಾನೂ ಕೂಡ ಕೊಹ್ಲಿಯ ದೊಡ್ಡ ಅಭಿಮಾನಿ, ಅವರು ನಾಯಕತ್ವದಲ್ಲೂ ಯಶಸ್ಸು ಸಾಧಿಸುತ್ತಿದ್ದಾರೆ ಎಂಬುದು ಶೇನ್ ಅಭಿಪ್ರಾಯವಾಗಿದೆ.
ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯಲ್ಲಿ ಅಬ್ಬರಿಸುತ್ತಿರುವ ಆಸೀಸ್ ಮಾಜಿ ನಾಯಕ ಸ್ಟೀವ್ ಸ್ಮಿತ್ ಮೂರು ಪಂದ್ಯಗಳಿಂದ 479 ರನ್ ಪೇರಿಸಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್ನಲ್ಲಿ ನಂ. ಸ್ಥಾನ ಅಲಂಕರಿಸುವ ಮೂಲಕ ಬಾಲ್ ಟ್ಯಾಪಿಂಗ್ ಪ್ರಕರಣದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಭರ್ಜರಿ ಕಮ್ಬ್ಯಾಕ್ ಮಾಡಿದ್ದಾರೆ.