ಹೈದರಾಬಾದ್: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಿಂದ ಸಾಫ್ಟ್ ಸಿಗ್ನಲ್ ನಿಯಮವನ್ನು ತೆಗೆದುಹಾಕುವ ನಿರ್ಧಾರಕ್ಕೆ ಭಾರತದ ಮಾಜಿ ಶ್ರೇಷ್ಠ ಕ್ರಿಕೆಟ್ ಆಟಗಾರ ಸುನಿಲ್ ಗವಾಸ್ಕರ್ ಕ್ರಿಕೆಟ್ ನಿಯಂತ್ರಣ ಮಂಡಳಿವನ್ನು ಶ್ಲಾಘಿಸಿದ್ದಾರೆ.
ದೇಶೀಯ ಮಟ್ಟದಲ್ಲಿ ಸಾಫ್ಟ್ ಸಿಗ್ನಲ್ ಇಲ್ಲದೇ ಆಟ ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ನೋಡಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ಗೆ ಮನವಿ ಮಾಡಬೇಕು ಎಂದು ಭಾರತದ ಮಾಜಿ ನಾಯಕ ಹೇಳಿದ್ದಾರೆ. "ಬಹುಶಃ ಅದು ಕಾರ್ಯರೂಪಕ್ಕೆ ಬಂದರೆ, ಅದನ್ನು ಶಾಶ್ವತ ಪಂದ್ಯವನ್ನಾಗಿ ಮಾಡಬಹುದು" ಎಂದು ಗವಾಸ್ಕರ್ ಹೇಳಿದರು.
ಈ ಹಿಂದೆ, ಟೀಂ ಇಂಡಿಯಾ ನಾಯಕ ಕೊಹ್ಲಿಯೂ ಸಹ ಈ ನಿಯಮಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ನಿರ್ಧಾರಗಳು ಆಟದ ಹಾದಿಯನ್ನು ಬದಲಾಯಿಸಬಹುದು. ವಿಶೇಷವಾಗಿ ದೊಡ್ಡ ಆಟಗಳಲ್ಲಿ ಎಂದು ಹೇಳಿದ್ದರು.
ಭಾರತ ಮತ್ತು ಇಂಗ್ಲೆಂಡ್ ನಡುವಿನ 4ನೇ ಟಿ-20 ಪಂದ್ಯದಲ್ಲಿ ಸಾಫ್ಟ್ ಸಿಗ್ನಲ್ ನಿಯಮದಿಂದಾಗಿ ಸೂರ್ಯಕುಮಾರ್ ಯಾದವ್ ಔಟಾಗಿದ್ದು, ವಿವಾದಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಕ್ರಿಕೆಟ್ ವಲಯದಲ್ಲಿ ಈ ನಿಯಮ ಚರ್ಚೆಗೆ ಗ್ರಾಸವಾಗಿತ್ತು.
ಏನಿದು ಸಾಫ್ಟ್ ಸಿಗ್ನಲ್: ಪಂದ್ಯದ ವೇಳೆ ಅನುಮಾನಾಸ್ಪದ ರನ್ ಅಥವಾ ಕ್ಯಾಚ್ ವಿಚಾರವಾಗಿ ಅಂಪೈರ್‌ಗೆ ನಿರ್ಣಯ ಪ್ರಕಟಿಸಲು ಸಾಧ್ಯವಾಗದೇ ಇದ್ದಾಗ ಟಿವಿ ಅಂಪೈರ್ ಸಹಾಯ ಕೇಳಲಾಗುತ್ತದೆ. ಈ ವೇಳೆ, ಟೀವಿ ಅಂಪೈರ್ ಮೈದಾನದಲ್ಲಿರುವ ಅಂಪೈರ್ ನಿರ್ಧಾರವನ್ನು ಪರಿಗಣಿಸಿ ಅಂತಿಮ ನಿರ್ಣಯ ಪ್ರಕಟಿಸಲಾಗುತ್ತದೆ. ಇದನ್ನು ಸಾಫ್ಟ್ ಸಿಗ್ನಲ್ ಎನ್ನಲಾಗುತ್ತದೆ. ಈ ಹಂತದಲ್ಲಿ ಒಂದೊಮ್ಮೆ ಟಿವಿ ಅಂಪೈರ್‌ಗೂ ನಿರ್ಣಯ ನೀಡಲು ಸಾಧ್ಯವಾಗದೇ ಇದ್ದಾಗ ಮೈದಾನದಲ್ಲಿರುವ ಅಂಪೈರ್ ನೀಡಿರುವ ನಿರ್ಣಯವನ್ನೇ ಎತ್ತಿಹಿಡಿಯುತ್ತದೆ.