ಟ್ರಿನಿಡಾಡ್: ಮೊದಲೆರಡು ಪಂದ್ಯಗಳಲ್ಲಿ ಸತತ ಅರ್ಧಶತಕ ಹಾಗೂ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ನಂತರ ಅವರನ್ನು ಕೊನೆಯ ಮೂರು ಪಂದ್ಯಗಳಿಂದ ಹೊರಗಿಟ್ಟಿದ್ದಕ್ಕೆ ಮೆಕಲಮ್ ಸ್ಪಷ್ಟನೆ ನೀಡಿದ್ದಾರೆ.
ಸುನೀಲ್ ನರೈನ್ ಕಿಡ್ನಿಯಲ್ಲಿದ್ದ ಕಲ್ಲುಗಳನ್ನು ತೆಗೆಸಲು ಆಸ್ಪತ್ರೆಗೆ ದಾಖಲಾಗಿದ್ದರು. ಆ ಕಾರಣದಿಂದ ಅವರು ಕಳೆದ ನಾಲ್ಕು ಪಂದ್ಯಗಳಿಗೆ ಅಲಭ್ಯರಾಗಿದ್ದರು ಎಂದು ಕೆಕೆಆರ್ ಹಾಗೂ ಟಿಕೆಆರ್ ಮುಖ್ಯ ಕೋಚ್ ಆಗಿರುವ ಬ್ರೆಂಡನ್ ಮೆಕಲಮ್ ಬಹಿರಂಗಪಡಿಸಿದ್ದಾರೆ. ಜೊತೆಗೆ ಅವರು ಸಂಪೂರ್ಣ ಫಿಟ್ ಆಗಿದ್ದು ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ ಅವರಿಂದ ನಾವು ಉತ್ತಮ ಪ್ರದರ್ಶನವನ್ನು ನಿರೀಕ್ಷಿಸಿದ್ದೇವೆ ಎಂದು ತಿಳಿಸಿದ್ದಾರೆ.
ನರೈನ್ ಸಿಪಿಎಲ್ ಮೊದಲ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ತೋರಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಆದರೆ ಅವರನ್ನು ಕಳೆದ ಮೂರು ಪಂದ್ಯಗಳಲ್ಲಿ ಆಡಿಸಿದಿದ್ದಕ್ಕೆ ಕಾರಣವನ್ನು ಬಹಿರಂಗಗೊಳಿಸದಿದ್ದದ್ದೂ ಟಿಕೆಆರ್ ಅಭಿಮಾನಿಗಳಿಗಷ್ಟೇ ಅಲ್ಲದೆ ಕೆಕೆಆರ್ನ ಅಭಿಮಾನಿಗಳಿಗೂ ಆಘಾತವನ್ನುಂಟು ಮಾಡಿತ್ತು. ಆದರೆ ಮಂಗಳವಾರ ನಡೆಯುತ್ತಿರುವ ಜಮೈಕಾ ವಿರುದ್ಧದ ಪಂದ್ಯದಲ್ಲಿ ನರೈನ್ ಕಣಕ್ಕಿಳಿದಿದ್ದನ್ನು ನೋಡಿ ಅಭಿಮಾನಿಗಳು ಸಮಾಧಾನಪಟ್ಟುಕೊಂಡಿದ್ದಾರೆ.
ಅಪರೇಷನ್ ಆದ ನಂತರ ವಿಶ್ರಾಂತಿ ತೆಗೆದುಕೊಂಡಿದ್ದ ನರೈನ್ ಜಮೈಕಾ ವಿರುದ್ಧದ ಪಂದ್ಯದಲ್ಲಿ 11 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 29 ರನ್ಗಳಿಸಿದ್ದಾರೆ.