ಅಬುಧಾಬಿ: ಸೂರ್ಯಕುಮಾರ್ ಯಾದವ್ ಹಾಗೂ ಕ್ವಿಂಟನ್ ಡಿಕಾಕ್ ಸಿಡಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ 5 ವಿಕೆಟ್ಗಳ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಡೆಲ್ಲಿ ಕ್ಯಾಪಿಟಲ್ ನೀಡಿದ 163 ರನ್ಗಳ ಗುರಿಯನ್ನು ಮುಂಬೈ ತಂಡ ಓವರ್ಗಳಲ್ಲಿ ತಲುಪುವ ಮೂಲಕ ಟೂರ್ನಿಯಲ್ಲಿ 5ನೇ ಜಯ ಸಾಧಿಸಿತು. ಡೆಲ್ಲಿ ಟೂರ್ನಿಯಲ್ಲಿ 2ನೇ ಸೋಲು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿಯಿತು.
163 ರನ್ಗಳ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ನಿಧಾನಗತಿ ಆರಂಭ ಪಡೆಯಿತು. ರೋಹಿತ್ ಶರ್ಮಾ 12 ಎಸೆತಗಳಲ್ಲಿ ಕೇವಲ 5 ರನ್ಗಳಿಸಿ ಔಟಾದರು. ಆದರೆ 2ನೇ ವಿಕೆಟ್ಗೆ ಜೊತೆಯಾದ ಸೂರ್ಯಕುಮಾರ್ ಯಾದವ್(53) ಹಾಗೂ ಡಿಕಾಕ್(53) 2ನೇ ವಿಕೆಟ್ಗೆ 46 ರನ್ಗಳ ಜೊತೆಯಾಟ ನೀಡಿದರು. ಈ ಸಂದರ್ಭದಲ್ಲಿ ಬೌಲಿಂಗ್ ಇಳಿದ ಅನುಭವಿ ಸ್ಪಿನ್ನರ್ ಅಶ್ವಿನ್ ಡಿಕಾಕ್ ವಿಕೆಟ್ ಪಡೆದು ಡೆಲ್ಲಿ ಮುನ್ನಡೆ ದೊರಕಿಸಿಕೊಟ್ಟರು.
-
Here it is! @mipaltan win by 5 wickets and register their 5th win in #Dream11IPL 2020.
— IndianPremierLeague (@IPL) October 11, 2020 " class="align-text-top noRightClick twitterSection" data="
Scorecard - https://t.co/0fS0687cpP #MIvDC pic.twitter.com/pbOYlnILOP
">Here it is! @mipaltan win by 5 wickets and register their 5th win in #Dream11IPL 2020.
— IndianPremierLeague (@IPL) October 11, 2020
Scorecard - https://t.co/0fS0687cpP #MIvDC pic.twitter.com/pbOYlnILOPHere it is! @mipaltan win by 5 wickets and register their 5th win in #Dream11IPL 2020.
— IndianPremierLeague (@IPL) October 11, 2020
Scorecard - https://t.co/0fS0687cpP #MIvDC pic.twitter.com/pbOYlnILOP
ಡಿಕಾಕ್ ನಂತರ ಯಾದವ್ ಜೊತೆಗೂಡಿ ಯುವ ಬ್ಯಾಟ್ಸ್ಮನ್ ಇಶಾನ್ ಕಿಶನ್ 57 ರನ್ಗಳ ಜೊತೆಯಾಟ ನೀಡಿ ತಂಡವನ್ನು ಗೆಲುವಿನ ಸನಿಹ ತಂದರು. 32 ಎಸೆತಗಳಲ್ಲಿ 6 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 53 ರನ್ಗಳಿಸಿದ್ದ ಯಾದವ್ ರಬಾಡಗೆ ವಿಕೆಟ್ ಒಪ್ಪಿಸಿದರು.
ಇವರ ನಂತರ ಬಂದ ಬರ್ತಡೇ ಬಾಯ್ ಹಾರ್ದಿಕ್ ಪಾಂಡ್ಯ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದರು. ಆದರೆ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ ಇಶಾನ್ ಕಿಶನ್ ಕೇವಲ 15 ಎಸೆತಗಳಲ್ಲಿ ತಲಾ 2 ಸಿಕ್ಸರ್ ಹಾಗೂ ಬೌಂಡರಿ ಸಹಿತ 28 ರನ್ ಗಳಿಸಿ ರಬಾಡ ಬೌಲಿಂಗ್ನಲ್ಲಿ ಗೆಲುವಿಗೆ 11 ರನ್ಗಳ ಅಗತ್ಯವಿದ್ದಾಗ ಔಟ್ ಆದರು.
ಪೊಲಾರ್ಡ್11 ರನ್ ಮತ್ತು ಕೃನಾಲ್ ಪಾಂಡ್ಯ 12 ರನ್ಗಳಿಸಿ ತಂಡವನ್ನು ಗೆಲುವಿನ ಗಡಿದಾಟಿಸಿದರು.
ಡೆಲ್ಲಿ ಕ್ಯಾಪಿಟಲ್ ಪರ ತನ್ನ ಅದ್ಭುತ ಬೌಲಿಂಗ್ ಪ್ರದರ್ಶನವನ್ನು ಇಂದಿನ ಪಂದ್ಯದಲ್ಲೂ ಮುಂದುವರಿಸಿದ ಕಗಿಸೋ ರಬಾಡ 4 ಓವರ್ಗಳಲ್ಲಿ 28 ರನ್ ನೀಡಿ 2 ವಿಕೆಟ್ ಪಡೆದರು. ಇವರಿಗೆ ಉತ್ತಮ ಸಾಥ್ ನೀಡಿದ ಅಶ್ವಿನ್, ಅಕ್ಷರ್ ಪಟೇಲ್ ಹಾಗೂ ಮಾರ್ಕಸ್ ಸ್ಟೋಯ್ನಿಸ್ ತಲಾ ಒಂದು ವಿಕೆಟ್ ಪಡೆದರು.
ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ತಂಡ ಶಿಖರ್ ಧವನ್ ಅವರ 69 ರನ್ ಹಾಗೂ ಶ್ರೇಯಸ್ ಅಯ್ಯರ್ ಅವರ 42 ರನ್ಗಳ ನೆರವಿನಿಂದ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 162 ರನ್ಗಳಿಸಿತ್ತು.