ಮುಂಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ 2011ರಲ್ಲಿ ಗೆದ್ದ ಏಕದಿನ ವಿಶ್ವಕಪ್ ಫೈನಲ್ ಪಂದ್ಯವನ್ನು ಅವರ ವೃತ್ತಿ ಜೀವನದ ಶ್ರೇಷ್ಠ ಪಂದ್ಯ ಎಂದಿದ್ದಾರೆ. ಇದನ್ನು ಬಿಟ್ಟರೆ 2016ರ ವಿಶ್ವಕಪ್ನ ಕ್ವಾರ್ಟರ್ಫೈನಲ್ ಪಂದ್ಯ ಅವರ ನೆಚ್ಚಿನ ಪಂದ್ಯ ಎಂದು ತಿಳಿಸಿದ್ದಾರೆ.
ವಿಶ್ವದ ಶ್ರೇಷ್ಠ ಬ್ಯಾಟ್ಸ್ಮನ್ ಆಗಿ ವಿಜೃಂಭಿಸುತ್ತಿರುವ ಕೊಹ್ಲಿ ಟಿವಿ ಶೋ ಒಂದರಲ್ಲಿ ಮಾತನಾಡುತ್ತಾ ತಮ್ಮ ನೆಚ್ಚಿನ ಪಂದ್ಯಗಳನ್ನು ಬಹಿರಂಗಪಡಿಸಿದ್ದಾರೆ.
2011ರ ವಿಶ್ವಕಪ್ ಫೈನಲ್ ಪಂದ್ಯವನ್ನು ಬಿಟ್ಟರೆ ನನ್ನ ನೆಚ್ಚಿನ ಪಂದ್ಯವೆಂದರೆ 2017 ರ ಟಿ-20 ವಿಶ್ವಕಪ್ನಲ್ಲಿ ಮೊಹಾಲಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯ ಎಂದು ರನ್ಮಷಿನ್ ಕೊಹ್ಲಿ ತಿಳಿಸಿದ್ದಾರೆ.
2011ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧದ ಗೆದ್ದು 28 ವರ್ಷಗಳ ವಿಶ್ವಕಪ್ ಬರ ನೀಗಿಸಿಕೊಂಡಿತ್ತು. ಇನ್ನು 2016ರಲ್ಲಿ ಟಿ-20 ವಿಶ್ವಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ವಿರಾಟ್ 82 ರನ್ಗಳಿಸಿ ತಂಡವನ್ನು ಸೆಮಿಫೈನಲ್ಗೆ ಪ್ರವೇಶಿಸಲು ಕಾರಣರಾಗಿದ್ದರು.
ಆದರೆ, ಭಾರತ ತಂಡ ಸೆಮಿಫೈನಲ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋಲುಕಾಣುವ ಮೂಲಕ ನಿರಾಶೆ ಅನುಭವಿಸಿತ್ತು.