ಮುಂಬೈ: ವಿಶ್ವಕಪ್ ಸೆಮಿಫೈನಲ್ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯ ಅನುಭವಿಸಿ, ಟೂರ್ನಿಯಿಂದ ಹೊರಬಿದ್ದಿದ್ದು, ಇದೀಗ ತಂಡದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ ಎಂಬ ಮಾತು ಗಂಭೀರವಾಗಿ ಕೇಳಿ ಬರುತ್ತಿದೆ.
ಈಗಾಗಲೇ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಜತೆಗಿನ ಒಪ್ಪಂದವನ್ನ 45 ದಿನಗಳ ಕಾಲ ವಿಸ್ತರಣೆ ಮಾಡಲಾಗಿದ್ದು, ಸಹಾಯಕ ಕೋಚ್ ಆಗಿರುವ ಸಂಜಯ್ ಬಂಗಾರ್ ಅವರನ್ನ ಬ್ಯಾಟಿಂಗ್ ಕೋಚ್ ಹುದ್ದೆಯಿಂದ ಕೈಬಿಡುವ ಸಾಧ್ಯತೆ ದಟ್ಟವಾಗಿದೆ.
ವಿಶ್ವಕಪ್ನಲ್ಲಿ ಬ್ಯಾಟಿಂಗ್,ಫೀಲ್ಡಿಂಗ್ನಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಬ್ಯಾಟಿಂಗ್ನಲ್ಲಿ ಕೆಲ ಆಟಗಾರರು ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಕಾರಣ ಕೋಚ್ ತಲೆದಂಡವಾಗುವ ಲಕ್ಷಣಗಳು ಕಾಣಿಸುತ್ತಿವೆ. ಬೌಲಿಂಗ್ ಕೋಚ್ ಭರತ್ ಅರುಣ್ ಹಾಗೂ ಫೀಲ್ಡಿಂಗ್ ಕೋಚ್ ಶ್ರೀಧರ್ ಆಟಗಾರರ ಗುಣಮಟ್ಟ ವೃದ್ಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬ್ಯಾಟಿಂಗ್ ಕೋಚ್ ಇದರಲ್ಲಿ ವಿಫಲಗೊಂಡಿರುವ ಕಾರಣ ಬಿಸಿಸಿಐ ವೆಸ್ಟ್ ಇಂಡೀಸ್ ಸರಣಿಗೂ ಮೊದಲೇ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಟೀಂ ಇಂಡಿಯಾ ಇಂಗ್ಲೆಂಡ್ನಿಂದ ಬಂದ ತಕ್ಷಣ ಬಿಸಿಸಿಐ ಆಡಳಿತಾತ್ಮಕ ಮಂಡಳಿ ಸಭೆ ನಡೆಸಲಿದ್ದು, ಕೆಲವೊಂದು ಮಹತ್ವದ ಕ್ರಮ ಕೈಗೊಳ್ಳುವ ಸುಳಿವು ಸಿಕ್ಕಿದೆ.