ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ ಐದು ಟಿ-20 ಪಂದ್ಯಗಳ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ 5-0 ಅಂತರದ ಕ್ಲೀನ್ ಸ್ವೀಪ್ ಮಾಡುವ ಮೂಲಕ ಹೊಸ ಇತಿಹಾಸ ರಚನೆ ಮಾಡಿದ್ದು, ಇದೀಗ ನಾಳೆಯಿಂದ ಆರಂಭಗೊಳ್ಳಲಿರುವ ಏಕದಿನ ಸರಣಿಗಾಗಿ ಟೀಂ ಇಂಡಿಯಾ ಮಾಸ್ಟರ್ ಪ್ಲಾನ್ ರೂಪಿಸಿಕೊಂಡಿದೆ.
ಗಾಯಗೊಂಡು ಕಿವೀಸ್ ವಿರುದ್ಧದ ಕ್ರಿಕೆಟ್ ಸರಣಿಯಿಂದ ಆರಂಭಿಕ ಎಡಗೈ ಬ್ಯಾಟ್ಸ್ಮನ್ ಶಿಖರ್ ಧವನ್ ಹೊರಬಿದ್ದಿರುವ ಕಾರಣ, ಆರಂಭಿಕರಾಗಿ ಪೃಥ್ವಿ ಶಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ವೇಳೆ ಶಿಖರ್ ಭುಜದ ಗಾಯಕ್ಕೊಳಗಾಗಿದ್ದಾರೆ. ಹೀಗಾಗಿ ಏಕದಿನ ತಂಡಕ್ಕೆ ಪೃಥ್ವಿ ಶಾ ಚಾನ್ಸ್ ಪಡೆದುಕೊಂಡಿದ್ದಾರೆ. ಇದೇ ವಿಷಯವಾಗಿ ಮಾತನಾಡಿರುವ ಕ್ಯಾಪ್ಟನ್ ಖಂಡಿತವಾಗಿ ಅವರು ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಪೃಥ್ವಿ ಜತೆ ಕನ್ನಡಿಗ ಮಯಾಂಕ್ ಅಗರವಾಲ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ದಟ್ಟವಾಗಿದೆ.
ರೋಹಿತ್ ಸ್ಥಾನಕ್ಕೆ ಕನ್ನಡಿಗನ ಆಯ್ಕೆ
-
NEWS : Rohit Sharma has been ruled out of the upcoming ODI and the Test series against New Zealand.
— BCCI (@BCCI) February 4, 2020 " class="align-text-top noRightClick twitterSection" data="
Mayank Agarwal has been named as his replacement in the ODI squad. #NZvIND #TeamIndia pic.twitter.com/AUMeCSNfWQ
">NEWS : Rohit Sharma has been ruled out of the upcoming ODI and the Test series against New Zealand.
— BCCI (@BCCI) February 4, 2020
Mayank Agarwal has been named as his replacement in the ODI squad. #NZvIND #TeamIndia pic.twitter.com/AUMeCSNfWQNEWS : Rohit Sharma has been ruled out of the upcoming ODI and the Test series against New Zealand.
— BCCI (@BCCI) February 4, 2020
Mayank Agarwal has been named as his replacement in the ODI squad. #NZvIND #TeamIndia pic.twitter.com/AUMeCSNfWQ
ಇನ್ನು ಕಿವೀಸ್ ವಿರುದ್ಧದ ಕೊನೆಯ ಟಿ-20 ಪಂದ್ಯದಲ್ಲಿ ಗಾಯಗೊಂಡು ರೋಹಿತ್ ಶರ್ಮಾ ಹೊರಬಿದ್ದಿರುವ ಕಾರಣ, ಅವರ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರವಾಲ್ ಆಯ್ಕೆಯಾಗಿದ್ದು, ಬಿಸಿಸಿಐ ಇದೀಗ ಹೆಸರು ಫೈನಲ್ ಮಾಡಿ ತಂಡವನ್ನ ಪ್ರಕಟಿಸಿದೆ.
ನಾಳೆ ಏಕದಿನ ಸರಣಿ ಆರಂಭಗೊಳ್ಳುತ್ತಿರುವುದರಿಂದ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ವಿರಾಟ್, ಖಂಡಿತವಾಗಿ ನಾಳೆಯ ಪಂದ್ಯದಲ್ಲಿ ಶಾ ಆರಂಭಿಕರಾಗಿ ಟೀಂ ಇಂಡಿಯಾ ಪರ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಎಂದಿದ್ದಾರೆ. ಇದರ ಜತೆಗೆ ಕನ್ನಡಿಗ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ ಮೊದಲ ಪಂದ್ಯ ಕೈಚೆಲ್ಲಿದ ಬಳಿಕ ನಂತರದ ಎರಡು ಪಂದ್ಯಗಳಲ್ಲಿ ಗೆಲುವು ದಾಖಲು ಮಾಡಿ ಸರಣಿಯನ್ನ 2-1 ಅಂತರದಿಂದ ಕೈವಶ ಮಾಡಿಕೊಂಡಿತ್ತು.