ETV Bharat / sports

2ನೇ ಟಿ-20ಯಲ್ಲಿ ನಿಧಾನಗತಿ ಬೌಲಿಂಗ್​: ಟೀಂ ಇಂಡಿಯಾಗೆ ದಂಡ

author img

By

Published : Mar 15, 2021, 7:28 PM IST

ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್​ ಮಾಡಿದ್ದಕ್ಕಾಗಿ ಟೀಂ ಇಂಡಿಯಾ ದಂಡಕ್ಕೆ ಗುರಿಯಾಗಿದೆ.

Team india
Team india

ದುಬೈ: ಇಂಗ್ಲೆಂಡ್​ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್​ ಮಾಡಿದ್ದಕ್ಕಾಗಿ ಟೀಂ ಇಂಡಿಯಾಗೆ ದಂಡ ವಿಧಿಸಲಾಗಿದೆ.

ತಂಡದ ಶುಲ್ಕದ ಶೇ 20ರಷ್ಟು ದಂಡ ವಿಧಿಸಲಾಗಿದೆ ಎಂದು ತಿಳಿದು ಬಂದಿದ್ದು, ನಿಗದಿತ ವೇಳೆಗಿಂತಲೂ ಹೆಚ್ಚಿನ ಅವಧಿ ತೆಗೆದುಕೊಂಡು ಬೌಲಿಂಗ್ ಮಾಡಿದ್ದಕ್ಕಾಗಿ ದಂಡ ವಿಧಿಸಲಾಗಿದೆ ಎಂದು ಐಸಿಸಿ ಎಲೈಟ್​ ಪ್ಯಾನಲ್​ ಆಫ್​ ಮ್ಯಾಚ್​ ರೆಫರಿ ಜಾವಗಲ್​ ಶ್ರೀನಾಥ್ ತಿಳಿಸಿದ್ದಾರೆ. ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್​ 2.22 ಪ್ರಕಾರ ಆಟಗಾರರು ತಮ್ಮ ಪಂದ್ಯದ ಶುಲ್ಕದ ಶೇ 20ರಷ್ಟು ದಂಡ ನೀಡಬೇಕಾಗುತ್ತದೆ.

ಇದನ್ನೂ ಓದಿ: ಸಂಜನಾಗೆ ಜಸ್ಪ್ರೀತ್ ಕ್ಲೀನ್ ಬೌಲ್ಡ್‌! ಬದುಕಿನ 2ನೇ ಇನ್ನಿಂಗ್ಸ್‌ ಆರಂಭಿಸಿದ ಬುಮ್ರಾ

ಇಂಗ್ಲೆಂಡ್​ ವಿರುದ್ಧ ನಿನ್ನೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್​ಗಳ ಗೆಲುವು ದಾಖಲು ಮಾಡುವ ಮೂಲಕ ಸರಣಿಯಲ್ಲಿ 1-1 ಅಂತರದಿಂದ ಸಮಬಲ ಮಾಡಿಕೊಂಡಿದೆ.

ಚುಟುಕು ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಿದ್ದ ಇಶಾನ್​ ಕಿಶನ್​ ಅಬ್ಬರದ 56 ರನ್​ ಹಾಗೂ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ಅಜೇಯ 73 ರನ್​ಗಳಿಕೆ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಮೂರನೇ ಟಿ-20 ಪಂದ್ಯ ನಾಳೆ ನಡೆಯಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.