ಅಹಮದಾಬಾದ್(ಗುಜರಾತ್): ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ-ಇಂಗ್ಲೆಂಡ್ ತಂಡಗಳ ನಡುವೆ ಅಹರ್ನಿಶಿ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 48.4 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 112 ರನ್ ಗಳಿಸಿದೆ.
ಇದನ್ನೂ ಓದಿ: ನರೇಂದ್ರ ಮೋದಿ ಕ್ರೀಡಾಂಗಣದ ಲೈಟ್ ಕುರಿತು ಆತಂಕ ವ್ಯಕ್ತಪಡಿಸಿದ ವಿರಾಟ್!
ಇದಕ್ಕೆ ಪ್ರತಿಯಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 83 ರನ್ ಗಳಿಸಿದ್ದು, ಆರಂಭಿಕ ರೋಹಿತ್ ಶರ್ಮಾ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.
ಆಕಸ್ಮಿಕವಾಗಿ ಲಾಲಾರಸ ಹಚ್ಚಿದ ಸ್ಟೋಕ್ಸ್
ಟೀಂ ಇಂಡಿಯಾ ಬ್ಯಾಟಿಂಗ್ ಮಾಡ್ತಿದ್ದ ವೇಳೆ ಬೌಲಿಂಗ್ ಮಾಡಲು ಬಂದ ಬೆನ್ ಸ್ಟೋಕ್ಸ್ ಚೆಂಡಿಗೆ ಲಾಲಾರಸ ಹಚ್ಚಿದ್ದು, ಹೀಗಾಗಿ ಸ್ಯಾನಿಟೈಸ್ ಮಾಡಲಾಗಿದೆ. ಇಂಗ್ಲೆಂಡ್ ತಂಡದ ಆಲ್ರೌಂಡರ್ ಎಸೆದ 12ನೇ ಓವರ್ನಲ್ಲಿ ಈ ಘಟನೆ ನಡೆದಿದೆ. ಕೊರೊನಾ ಹಾವಳಿ ಹೆಚ್ಚಾಗಿರುವ ಕಾರಣ ಪಂದ್ಯದ ವೇಳೆ ಚೆಂಡುಗಳಿಗೆ ಲಾಲಾರಸ ಬಳಕೆ ಮಾಡುವುದನ್ನು ನಿಷೇಧ ಮಾಡಲಾಗಿದ್ದು, ಐಸಿಸಿ ಕೂಡ ಇದಕ್ಕೆ ಅನುಮತಿ ನೀಡಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಅಕ್ಸರ್ ಪಟೇಲ್ 6 ವಿಕೆಟ್, ಅಶ್ವಿನ್ 3 ಹಾಗೂ ಇಶಾಂತ್ ಶರ್ಮಾ 1 ವಿಕೆಟ್ ಪಡೆದು ಮಿಂಚಿದ್ದಾರೆ.