ಹೈದರಾಬಾದ್: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್ ನಟಿ ಹಾಗೂ ನಿರ್ಮಾಪಕಿ ಅನುಷ್ಕಾ ಶರ್ಮಾ ಸೋಮವಾರ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ.
- " class="align-text-top noRightClick twitterSection" data="
">
ಕಳೆದ ಆಗಸ್ಟ್ 17 ರಂದು ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಜನವರಿಯಲ್ಲಿ ತಾವೂ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ ಎಂದು ತಾವೂ ಪೋಷಕರಾಗುತ್ತಿರುವ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದರು. ನಿನ್ನೆ ಮಧ್ಯಾಹ್ನ ನಮಗೆ ಹೆಣ್ಣು ಮಗು ಜನಿಸಿದೆ ಎಂದು ವಿರಾಟ್ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದರು.
ಸದ್ಯ ವಿರಾಟ್ ಮಗುವಿನ ಪಾದದ ಫೋಟೋವನ್ನು ವಿರಾಟ್ ಕೊಹ್ಲಿ ಸಹೋದರ ಶೇರ್ ಮಾಡಿದ್ದಾರೆ. ವಿಕಾಸ್ ಕೊಹ್ಲಿ, 'ಖುಷಿ ತುಂಬಿದೆ, ಮನೆಯಲ್ಲಿ ದೇವತೆ ಇದ್ದಾಳೆ' ಎಂದು ಫೋಟೋಕ್ಕೆ ಕ್ಯಾಪ್ಶನ್ ನೀಡಿದ್ದಾರೆ.
ಓದಿ : ಹೆಣ್ಣು ಮಗುವಿಗೆ ಜನ್ಮ ನೀಡಿದ ಅನುಷ್ಕಾ ಶರ್ಮಾ: ಅಪ್ಪನಾದ ಖುಷಿಯಲ್ಲಿ ವಿರಾಟ್!