ಮುಂಬೈ: ಐಸಿಸಿ ಬಿಡುಗಡೆ ಮಾಡಿದ ನೂತನ ಏಕದಿನ ಐಸಿಸಿ ರ್ಯಾಂಕಿಂಗ್ನಲ್ಲಿ ಕೊಹ್ಲಿ ಹಾಗೂ ಬುಮ್ರಾ ಕ್ರಮವಾಗಿ ಬ್ಯಾಟಿಂಗ್ ಹಾಗೂ ಬೌಲಿಂಗ್ ರ್ಯಾಂಕಿಂಗ್ನಲ್ಲಿ ಮುಂದುವರಿದಿದ್ದಾರೆ.
895 ರೇಟಿಂಗ್ ಪಾಯಿಂಟ್ ಹೊಂದಿರುವ ವಿರಾಟ್ ಕೊಹ್ಲಿ ಏಕದಿನ ಬ್ಯಾಟಿಂಗ್ನಲ್ಲಿ ಅಗ್ರಸ್ಥಾನದಲ್ಲಿದ್ದರೆ, ರೋಹಿತ್ ಶರ್ಮಾ 863 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿ ಪಾಕಿಸ್ತಾನದ ಬಾಬರ್ ಅಜಂ , 4ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಫಾಫ್ ಡು ಫ್ಲೆಸಿಸ್, 5ನೇ ಸ್ಥಾನದಲ್ಲಿ ರಾಸ್ ಟೇಲರ್ ಇದ್ದಾರೆ. ಕೊಹ್ಲಿ ಮತ್ತು ರೋಹಿತ್ ಮಾತ್ರ ಟಾಪ್ 10ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಬೌಲಿಂಗ್ ಶ್ರೇಯಾಂಕದಲ್ಲಿ ಜಸ್ಪ್ರೀತ್ ಬುಮ್ರಾ 797 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿರುವ ಟ್ರೆಂಟ್ ಬೌಲ್ಟ್ಗಿಂತ 57 ಅಂಕ ಮುನ್ನಡೆಯಲ್ಲಿದ್ದಾರೆ. 3ನೇ ಸ್ಥಾನದಲ್ಲಿ ಅಫ್ಘಾನಿಸ್ತಾನದ ಮುಜೀಬ್, 4ನೇ ಸ್ಥಾನದಲ್ಲಿದ.ಆಫ್ರಿಕಾದ ರಬಾಡ, 5ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಇದ್ದಾರೆ.
ಬುಮ್ರಾ ಹೊರತುಪಡಿಸಿದರೆ ಭಾರತದ ಯಾವೊಬ್ಬ ಭಾರತೀಯ ಬೌಲರ್ ಟಾಪ್ 10 ನಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.