ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳನ್ನು ದಾಟಿದ ಮೊದಲ ಭಾರತೀಯ ಸೆಲೆಬ್ರಿಟಿ ಮತ್ತು ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಈ ಮೂಲಕ ಕ್ರಿಸ್ಟಿಯಾನೊ ರೊನಾಲ್ಡೊ, ಲಿಯೋನೆಲ್ ಮೆಸ್ಸಿ ಮತ್ತು ನೇಮರ್ ಮುಂತಾದ ಸೆಲೆಬ್ರಿಟಿಗಳಿರುವ ನೂರು ಮಿಲಿಯನ್‌ಗೂ ಹೆಚ್ಚು ಫಾಲೋವರ್ಗಳು ಇರುವವರ ಪಟ್ಟಿಗೆ ವಿರಾಟ್ ಕೊಹ್ಲಿ ಕೂಡಾ ಸೇರ್ಪಡೆಯಾಗಿದ್ದಾರೆ.
ಭಾರತದಲ್ಲಿ ಅಗ್ರಸ್ಥಾನದಲ್ಲಿ ವಿರಾಟ್ ಕೊಹ್ಲಿ ಇದ್ದು, ನಂತರದ ಸ್ಥಾನದಲ್ಲಿ 60 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಎರಡನೇ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲು ಸಿದ್ದವಾದ ಹಳ್ಳಿಹಕ್ಕಿ..!
ಇನ್‌ಸ್ಟಾಗ್ರಾಮ್ ಹೊರತಾಗಿ, ಕೊಹ್ಲಿ ಟ್ವಿಟರ್ ಮತ್ತು ಫೇಸ್‌ಬುಕ್‌ನಂತಹ ಇತರೆ ಸೋಷಿಯಲ್ ಫ್ಲಾಟ್ಫಾರ್ಮ್ಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಟ್ವಿಟರ್ನಲ್ಲಿ 40.8 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಫೇಸ್‌ಬುಕ್‌ನಲ್ಲಿ 36 ಮಿಲಿಯನ್‌ಗೂ ಹೆಚ್ಚು ಲೈಕ್‌ಗಳನ್ನು ಪಡೆದುಕೊಂಡಿದ್ದಾರೆ.
-
Virat Kohli - the first cricket star to hit 100 million followers on Instagram 🎉 pic.twitter.com/HI1hTSbo8M
— ICC (@ICC) March 1, 2021 " class="align-text-top noRightClick twitterSection" data="
">Virat Kohli - the first cricket star to hit 100 million followers on Instagram 🎉 pic.twitter.com/HI1hTSbo8M
— ICC (@ICC) March 1, 2021Virat Kohli - the first cricket star to hit 100 million followers on Instagram 🎉 pic.twitter.com/HI1hTSbo8M
— ICC (@ICC) March 1, 2021
ವಿರಾಟ್ ಕೊಹ್ಲಿ ನೂರು ಮಿಲಿಯನ್‌ಗೂ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಟ್ವೀಟ್ ಮಾಡಿದ್ದು, ಸಂತಸ ಹಂಚಿಕೊಂಡಿದೆ.
ಈಗಿನ ಮಾಹಿತಿಯಂತೆ ಪೋರ್ಚುಗಲ್ನ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಇನ್‌ಸ್ಟಾಗ್ರಾಮ್‌ನಲ್ಲಿ 266 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ. ಅವರ ನಂತರ ಪ್ರಸಿದ್ಧ ಗಾಯಕ ಅರಿಯಾನಾ ಗ್ರಾಂಡೆ 224 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದಾರೆ. ಡಬ್ಲ್ಯುಡಬ್ಲ್ಯುಇ ಸೂಪರ್ ಸ್ಟಾರ್, ಹಾಲಿವುಡ್ ನಟ ಡ್ವೇನ್ ಜಾನ್ಸನ್ 220 ಮಂದಿ ಫಾಲೋವರ್‌ಗಳನ್ನು ಹೊಂದಿದ್ದಾರೆ.