ನವದೆಹಲಿ: ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಇನ್‌ಸ್ಟಾಗ್ರಾಮ್‌ನಲ್ಲಿ 50 ಮಿಲಿಯನ್ ಫಾಲೋವರ್ಸ್ ಮಾರ್ಕ್ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.
ಪ್ರತಿ ಪಂದ್ಯದಲ್ಲೂ ಕ್ರಿಕೆಟಿಂಗ್ ದಾಖಲೆಗಳನ್ನು ಮುರಿಯುತ್ತಿರುವ ಕೊಹ್ಲಿ, ಸೋಶಿಯಲ್ ಮೀಡಿಯದಲ್ಲಿ ಸಖತ್ ಆಕ್ಟೀವ್.
31 ವರ್ಷದ ಕೊಹ್ಲಿ ಈವರೆಗೆ ಇನ್‌ಸ್ಟಾಗ್ರಾಮ್‌ನಲ್ಲಿ 930 ಪೋಸ್ಟ್‌ಗಳನ್ನು ಮಾಡಿದ್ದಾರೆ. ಹಾಗೆ ಇವರು ವಿಶ್ವಾದ್ಯಂತ ತಮ್ಮ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.
ಇನ್‌ಸ್ಟಾಗ್ರಾಮ್ ಅಧಿಕೃತ ಖಾತೆಯಲ್ಲಿ ಹೆಚ್ಚಿನ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ ಕೀರ್ತಿ ಪೋರ್ಚುಗಲ್ನ ಕ್ರಿಸ್ಟಿಯಾನೊ ರೊನಾಲ್ಡೊ ಅವರಿಗೆ ಸಲ್ಲುತ್ತೆ. ಕ್ರಿಸ್ಟಿಯಾನೊ ರೊನಾಲ್ಡೊಗೆ ಇನ್‌ಸ್ಟಾಗ್ರಾಮ್‌ನಲ್ಲಿ ಬರೋಬ್ಬರಿ 200 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
ಇನ್ನು ಭಾರತಕ್ಕೆ ಬರೋದಾದ್ರೆ ಕೊಹ್ಲಿಯ ನಂತರದ ಸ್ಥಾನದಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ 49.9 ಮಿಲಿಯನ್ ಅನುಯಾಯಿಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ದೀಪಿಕಾ ಪಡುಕೋಣೆ 44.1 ಅನುಯಾಯಿಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಕಳೆದ ವರ್ಷ ಎಂಎಸ್ ಧೋನಿ ಅವರನ್ನು ಹಿಂದಿಕ್ಕಿ ಕೊಹ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕನಾಗಿದ್ದರು.