ಅಡಿಲೇಡ್ : ದಾಖಲೆಗಳ ಸರದಾರ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಡಿಲೇಡ್‌ನ ಓವಲ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ವೇಳೆ ನೂತನ ದಾಖಲೆ ಬರೆದಿದ್ದಾರೆ. ಮೊದಲ ಇನ್ನಿಂಗ್ಸ್ನಲ್ಲಿ 74 ರನ್ ಗಳಿಸಿದ ವಿರಾಟ್ ಕೊಹ್ಲಿ, 51 ವರ್ಷದ ಹಿಂದೆ ಭಾರತದ ಮಾಜಿ ನಾಯಕ ಮನ್ಸೂರ್ ಅಲಿ ಖಾನ್ ಪಟೌಡಿ ನಿರ್ಮಾಣ ಮಾಡಿದ್ದ ದಾಖಲೆ ಮುರಿದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೆಚ್ಚು ರನ್ ಗಳಿಸಿದ ಭಾರತದ ನಾಯಕ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ನಾಯಕನಾಗಿ ಕೊಹ್ಲಿ 10 ಪಂದ್ಯಗಳಲ್ಲಿ ನಾಲ್ಕು ಶತಕ ಮತ್ತು ಎರಡು ಅರ್ಧಶತಕ ನೆರವಿನಿಂದ 851 ರನ್ ಗಳಿಸಿದ್ದಾರೆ. ಪಟೌಡಿ 11 ಟೆಸ್ಟ್ ಪಂದ್ಯಗಳಲ್ಲಿ ಎಂಟು ಅರ್ಧಶತಕ ಮತ್ತು ಒಂದು ಶತಕದ ನೆರವಿನಿಂದ 829 ರನ್ ಗಳಿಸಿದ್ದರು.