ETV Bharat / sports

ಅಹರ್ನಿಶಿ ಟೆಸ್ಟ್​ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ವಿರಾಟ್ ಕೊಹ್ಲಿ.. - ಅಹರ್ನಿಶಿ ಪಂದ್ಯದಲ್ಲಿ ಕೊಹ್ಲಿ ಶತಕ

ಬಾಂಗ್ಲಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿರುವ ವಿರಾಟ್‌ ಅಹರ್ನಿಶಿ ಟೆಸ್ಟ್​ ಪಂದ್ಯದಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ವಿರಾಟ್ ಕೊಹ್ಲಿ
author img

By

Published : Nov 23, 2019, 4:53 PM IST

ಕೋಲ್ಕತಾ: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾ ನಡುವಿನ ಅಹರ್ನಿಶಿ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

  • 20th Test century as Captain of India ✅
    27th Test century of his career ✅
    70th International century ✅
    41st international century as captain (joint-most)✅
    1st Indian to hit a century in day/night Test ✅#KingKohli pic.twitter.com/q01OKPauOu

    — BCCI (@BCCI) November 23, 2019 " class="align-text-top noRightClick twitterSection" data=" ">

ಬಾಂಗ್ಲಾ ಬೌಲರ್​ಗಳನ್ನ ಸಮರ್ಥವಾಗಿ ಎದುರಿಸಿದ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್​ನಲ್ಲಿ 27ನೇ ಶತಕ ದಾಖಲಿಸಿದ್ರು. ಈ ಮೂಲಕ ಅಹರ್ನಿಶಿ ಟೆಸ್ಟ್​ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಈವರೆಗೆ ವಿರಾಟ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 70 ಶತಕ ಸಿಡಿಸಿದ್ದು ಅತಿಹೆಚ್ಚು ಶತಕ ಸಿಡಿಸಿದವರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ 71ನೇ ಶತಕ ಸಿಸಡಿಸಿದ್ದು, 2ನೇ ಸ್ಥಾನದಲ್ಲಿದ್ದಾರೆ. 100 ಶತಕ ಸಿಡಿಸಿರುವ ಮಾಸ್ಟರ್ ಬ್ಲಾಸ್ಟರ್​ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ.

ಇದಕ್ಕೂ ಮುನ್ನ ಮೊದಲ ದಿನದಾಟದಲ್ಲಿ 32 ರನ್ ಗಳಿಸುವ ಮೂಲಕ ಟೆಸ್ಟ್​​ನಲ್ಲಿ 5000 ರನ್ ಪೂರೈಸಿದ ಭಾರತ ತಂಡದ ಮೊದಲ ನಾಯಕ ಎಂಬ ದಾಖಲೆಯನ್ನ ವಿರಾಟ್ ಬರೆದಿದ್ದರು.

Intro:Body:Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.