ನವದೆಹಲಿ: ಪ್ರಸಕ್ತ ಪೀಳಿಗೆಯ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ 1000ನೇ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಅವರ ಅಭಿಮಾನಿಗಳು ತಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
"2008 ರಿಂದ 2020ರ ದಾರಿ ಉದ್ದಕ್ಕೂ ಸಾಕಷ್ಟು ಕಲಿತಿದ್ದೇನೆ. ಈ ಜರ್ನಿಯಲ್ಲಿ ನೀವು ನನಗೆ ತೋರಿಸಿದ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. ನನ್ನ # 1000 ನೇ ಪೋಸ್ಟ್ ಇಲ್ಲಿದೆ" ಎಂದು ಕೊಹ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.
- " class="align-text-top noRightClick twitterSection" data="
">
ಅವರು ಪೋಸ್ಟ್ ಮಾಡಿರುವ ಫೋಟೋದಲ್ಲಿ ಪದಾರ್ಪಣ ಮಾಡಿದ ಸಂದರ್ಭದ ಫೋಟೋ ಹಾಗೂ ಪ್ರಸ್ತುತದ ಒಂದು ಫೋಟೋವನ್ನು ಬಳಸಿಕೊಂಡಿದ್ದಾರೆ.
ಕ್ರಿಕೆಟ್ ಜರ್ನಿಯಲ್ಲಿ ದಿನದಿಂದ ದಿನಕ್ಕೆ ಬೆಳೆಯುತ್ತಾ ಬಂದ ಕೊಹ್ಲಿ ತಮ್ಮ ಪ್ರಚಂಡ ಪ್ರದರ್ಶನದಿಂದ ಹಲವು ದಾಖಲೆಗಳನ್ನು ಪುಡಿಗಟ್ಟಿದ್ದಾರೆ. ಅಲ್ಲದೆ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಕೊಹ್ಲಿ 69.4 ಮಿಲಿಯನ್ ಇನ್ಸ್ಟಾಗ್ರಾಂ ಫಾಲೋವರ್ಸ್ ಹೊಂದಿದ್ದು, ಭಾರತದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಸೆಲೆಬ್ರೆಟಿಯಾಗಿದ್ದಾರೆ.
ಅಲ್ಲದೇ ಕೊಹ್ಲಿ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಹೆಚ್ಚು ಹಣಗಳಿಸುತ್ತಿರುವ ಕ್ರೀಡಾಪಟುಗಳಲ್ಲಿ ಕೊಹ್ಲಿ ಟಾಪ್10 ನಲ್ಲಿ ಸ್ಥಾನಪಡೆದುಕೊಂಡಿರುವ ಏಕೈಕ ಕ್ರಿಕೆಟಿಗನಾಗಿದ್ದಾರೆ.
31 ವರ್ಷದ ವಿರಾಟ್ ಕೊಹ್ಲಿ 2008ರಲ್ಲಿ ಶ್ರೀಲಂಕಾ ವಿರುದ್ಧ ಪದಾರ್ಪಣ ಮಾಡಿದ್ದರು. ಇಲ್ಲಿಯವರೆಗೆ ಅವರು 86 ಟೆಸ್ಟ್, 248 ಏಕದಿನ ಪಂದ್ಯ ಹಾಗೂ 82 ಟಿ-20 ಪಂದ್ಯಗಳನ್ನಾಡಿದ್ದಾರೆ. ಕ್ರಮವಾಗಿ 7,240, 11,867 ಹಾಗೂ 2,794 ರನ್ಗಳಿಸಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ 43 , ಟೆಸ್ಟ್ನಲ್ಲಿ 27 ಶತಕ ಸಿಡಿಸಿರುವ ಕೊಹ್ಲಿ ರ‍್ಯಾಕಿಂಗ್ ಪಟ್ಟಿಯಲ್ಲಿ ಏಕದಿನ ಕ್ರಿಕೆಟ್ನಲ್ಲಿ ನಂಬರ್ 1 , ಟೆಸ್ಟ್ನಲ್ಲಿ 2, ಹಾಗೂ ಟಿ20 ಯಲ್ಲಿ 10 ನೇ ಸ್ಥಾನದಲ್ಲಿದ್ದಾರೆ.