ದುಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಐಸಿಸಿ ಟೆಸ್ಟ್ ಕ್ರಿಕೆಟ್ ರ್ಯಾಂಕಿಂಗ್ನಲ್ಲಿ ಮೊದಲನೇ ಸ್ಥಾನದಲ್ಲಿ ಮುಂದುವರಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಹಾಗೂ ಟೆಸ್ಟ್ ಎರಡರಲ್ಲೂ ನಂಬರ್ ಒನ್ ಶ್ರೇಯಾಂಕವನ್ನು ಕಾಪಾಡಿಕೊಂಡಿದ್ದಾರೆ.
ಕಳೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ 2-1 ರ ಅಂತರದಲ್ಲಿ ಸರಣಿ ಜಯ ಸಾಧಿಸಿತ್ತು. ಈ ವೇಳೆ ಟೀಂ ಇಂಡಿಯಾ ಉತ್ತಮ ಪ್ರದರ್ಶನ ತೋರಿತ್ತು. ನಾಯಕನಾಗಿ ಅಮೋಘ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ ಸದ್ಯ 922 ಪಾಯಿಂಟ್ಗಳೊಂದಿಗೆ, ಬ್ಯಾಟಿಂಗ್ ಶ್ರೇಯಾಂಕದಲ್ಲಿ ಮೊದಲನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲ್ಯಾಂಡ್ನ ಕೇನ್ ವಿಲಿಯಮ್ಸನ್ ಹಾಗೂ ಭಾರತದ ಚೇತೇಶ್ವರ್ ಪೂಜಾರಾ 2 ಹಾಗೂ ಮೂರನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ರವೀಂದ್ರ ಜಡೇಜಾ 6 ಹಾಗೂ ರವಿಚಂದ್ರನ್ ಅಶ್ವಿನ್ 10 ನೇ ಸ್ಥಾನದಲ್ಲಿ, 16 ನೇ ಸ್ಥಾನದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ 21 ನೇ ಶ್ರೇಯಾಂಕದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್, 2ನೇ ಸ್ಥಾನದಲ್ಲಿ ಇಂಗ್ಲೆಂಡ್ನ ಜೇಮ್ ಆ್ಯಂಡರ್ಸನ್ ಮೂರನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಕಗಿಸೋ ರಬಾಡಾ ಇದ್ದಾರೆ.
ಆಲ್ರೌಂಡರ್ ವಿಭಾಗದಲ್ಲಿ ಹೋಲ್ಡರ್ ಮೊದಲ ಸ್ಥಾನ, ಶಕಿಬ್ ಹಾಗೂ ರವೀದ್ರ ಜಡೇಜಾ ನಂತರದ ಎರಡು ಸ್ಥಾನವನ್ನು ಉಳಿಸಿಕೊಂಡಿದ್ದಾರೆ.
ತಂಡದ ವಿಭಾಗದಲ್ಲಿ 113 ರೇಟಿಂಗ್ ಅಂಕ ಪಡೆದಿರುವ ಭಾರತ ಮೊದಲ ಸ್ಥಾನದಲ್ಲಿ ಮುಂದುವರಿದರೆ, ನ್ಯೂಜಿಲ್ಯಾಂಡ್ ಎರಡನೇ ಸ್ಥಾನ ಹಾಗೂ ದಕ್ಷಿಣ ಆಫ್ರಿಕಾ 3ನೇ, ಇಂಗ್ಲೆಂಡ್ 4, ಆಸ್ಟ್ರೇಲಿಯಾ 5 ಸ್ಥಾನಪಡೆದುಕೊಂಡಿದೆ.