ನವದೆಹಲಿ: ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಹಾಗಾಗಿ ಅವರಿಬ್ಬರು ಮುಂಬರುವ ಟಿ-20 ವಿಶ್ವಕಪ್ ತಂಡದಲ್ಲಿ ಅವಕಾಶ ಪಡೆಯಲು ಅರ್ಹರಾಗಿದ್ದಾರೆ ಎಂದು ಭಾರತ ತಂಡದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ.
22 ವರ್ಷದ ಇಶಾನ್ ಕಿಶನ್ ಮತ್ತು 30 ವರ್ಷದ ಸೂರ್ಯಕುಮಾರ್ ಯಾದವ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆಯನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಇಶಾನ್ ಪದಾರ್ಪಣೆಯ ಪಂದ್ಯದಲ್ಲಿ 32 ಎಸೆತಗಳಲ್ಲಿ 56 ರನ್ ಬಾರಿಸಿದರೆ, ಸೂರ್ಯಕುಮಾರ್ 4 ಮತ್ತು 5ನೇ ಪಂದ್ಯದಲ್ಲಿ 31 ಎಸೆತಗಳಲ್ಲಿ 57 ಮತ್ತು 17 ಎಸೆತಗಳಲ್ಲಿ 32 ರನ್ ಬಾರಿಸಿದ್ದರು.
ಇದನ್ನು ಓದಿ:ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಅಯ್ಯರ್ ಔಟ್.. 14ನೇ ಐಪಿಎಲ್ಗೂ ಡೌಟ್!
ಈ ಸರಣಿಯಲ್ಲಿ ಯುವ ಆಟಗಾರರು ತಮಗೆ ಸಿಕ್ಕ ಅವಕಾಶಗಳನ್ನು ಅತ್ಯುತ್ತಮವಾಗಿ ಬಳಸಿಕೊಂಡಿದ್ದಾರೆ. ಹಾಗಾಗಿ ತಂಡದ ಆಯ್ಕೆ ಖಂಡಿತಾ ಕಠಿಣವಾಗಿದೆ. ಆದರೆ ಇಶಾನ್ ತಮ್ಮ ಪದಾರ್ಪಣೆ ಮಾಡಿದ ಪಂದ್ಯದಲ್ಲಿ ಆಡಿದ ರೀತಿ ಮತ್ತು ಜೊತೆಗೆ ಸೂರ್ಯಕುಮಾರ್ ಯಾದವ್ ಆಡಿದ್ದನ್ನು ನೋಡಿದ ಮೇಲೆ ಈ ಇಬ್ಬರು ಆಟಗಾರರು ಖಂಡಿತಾ ನನ್ನ 15 ಆಟಗಾರರ ವಿಶ್ವಕಪ್ ತಂಡದಲ್ಲಿ ಇರುತ್ತಾರೆ ಎಂದು ಲಕ್ಷ್ಮಣ್ ತಿಳಿಸಿದ್ದಾರೆ.
ಇದು ಕಠಿಣ ಆಯ್ಕೆಯಾಗಿದೆ. ಆದರೆ ಈ ಇಬ್ಬರು ಆಟಗಾರರು ಮುಂಬರುವ ವಿಶ್ವಕಪ್ನಲ್ಲಿ ಭಾರತ ತಂಡದಲ್ಲಿ ಆಡಲು ಅರ್ಹರು ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.