ಮೆಲ್ಬೋರ್ನ್: ಏಕದಿನ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಮೂರನೇ ಟೆಸ್ಟ್ ಪಂದ್ಯದಲ್ಲೂ ಕಣಕ್ಕಿಳಿಯುವುದು ಅನುಮಾನ ಎಂದು ಆಸೀಸ್ ಕೋಚ್ ಸುಳಿವು ನೀಡಿದ್ದಾರೆ.
ಗಾಯದ ಕಾರಣದಿಂದಾಗಿ ವಾರ್ನರ್ ಟಿ-20 ಸರಣಿ ಮತ್ತು ಭಾರತ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಅವರ ಗಾಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೋಚ್, ಅವರು ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ವಾರ್ನರ್ ತೊಡೆಸಂದು ನೋವಿನಿಂದ ಬಳಲುತ್ತಿದ್ದಾರೆ. ಮುಂದಿನ ಟೆಸ್ಟ್ ಪಂದ್ಯಕ್ಕೆ ಇನ್ನೂ ಸಮಯವಿದೆ, ಹಾಗಾಗಿ ಕಾದು ನೋಡಬೇಕು ಎಂದು ಲ್ಯಾಂಗರ್ ಹೇಳಿದ್ದಾರೆ.
ಸಿಡ್ನಿ ಮೈದಾನದಲ್ಲಿ ಜನವರಿ 7 ರಿಂದ ಮೂರನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ವಾರ್ನರ್ ಅನುಪಸ್ಥಿತಿಯಲ್ಲಿ ಮ್ಯಾಥ್ಯೂ ವೇಡ್ ಓಪನರ್ ಆಗಿ ಬಡ್ತಿ ಪಡೆದಿದ್ದಾರೆ. ಯುವ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದಾರೆ.
ಇಲ್ಲಿಯವರೆಗೆ, ಬರ್ನ್ಸ್ ಮತ್ತು ವೇಡ್ ಆಸ್ಟ್ರೇಲಿಯಾಕ್ಕೆ ಉತ್ತಮ ಆರಂಭ ಒದಗಿಸಲು ಸಾಧ್ಯವಾಗಿಲ್ಲ. ಈ ಜೋಡಿ ಅಡಿಲೇಡ್‌ನಲ್ಲಿ 16 ಮತ್ತು 70 ರನ್ ಮತ್ತು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ 10 ರನ್ ಜೊತೆಯಾಟ ನೀಡಿದೆ.