ETV Bharat / sports

ಬಾಕ್ಸಿಂಗ್​ ಡೇ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವಿದೆ: ವಾರ್ನರ್ - ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ

ಗಾಯದ ಕಾರಣದಿಂದ ಮೊದಲ ಟೆಸ್ಟ್ ಪಂದ್ಯ ಕಳೆದುಕೊಂಡಿರುವ ಆರಂಭಿಕ ಆಟಗಾರ ಡೇವಿಡ್ ವಾರ್ನರ್, ಮುಂಬರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

David Warner
ಡೇವಿಡ್ ವಾರ್ನರ್
author img

By

Published : Dec 18, 2020, 3:40 PM IST

ಸಿಡ್ನಿ: ಬಹು ನಿರೀಕ್ಷಿತ ಭಾರತ-ಆಸೀಸ್ ನಡುವಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯ ವಂಚಿತ ಡೆವಿಡ್ ವಾರ್ನರ್ ಮುಂಬರುವ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ತೊಡೆಸಂದು ಗಾಯಕ್ಕೆ ತುತ್ತಾಗಿದ್ದ ವಾರ್ನರ್, ಕ್ಯಾನ್‌ಬೆರಾದಲ್ಲಿ ನಡೆದ ಮೂರನೇ ಏಕದಿನ ಪಂದ್ಯ, ಮೂರು ಪಂದ್ಯಗಳ ಟಿ-20 ಸರಣಿ ಮತ್ತು ಅಡಿಲೇಡ್‌ನಲ್ಲಿ ನಡೆಯುತ್ತಿರುವ ಆರಂಭಿಕ ಟೆಸ್ಟ್‌ನಿಂದ ಹೊರಗುಳಿದಿದ್ದರು.

"ನಾನು ಎಂದಿಗೂ ಟೆಸ್ಟ್ ಪಂದ್ಯವನ್ನು ಕಳೆದುಕೊಳ್ಳಲು ಬಯಸುವುದಿಲ್ಲ. ಗಾಯದ ಕಾರಣದಿಂದ ಮೊದಲ ಟೆಸ್ಟ್ ಪಂದ್ಯ ತಪ್ಪಿಸಿಕೊಂಡಿದ್ದೇನೆ. ಅದರ ಬಗ್ಗೆ ತುಂಬಾ ನಿರಾಶೆಯಾಗಿದ್ದೇನೆ" ಎಂದು ವಾರ್ನರ್ ಹೇಳಿದ್ದಾರೆ.

ಓದಿ 51 ವರ್ಷದ ಹಿಂದೆ ಪಟೌಡಿ.. ಈಗ ವಿರಾಟ್.. ಆಸೀಸ್‌ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಕಿಂಗ್ ಕೊಹ್ಲಿ ದಾಖಲೆ!!

"ನಾವು ಸರಣಿಯನ್ನು ಉತ್ತಮವಾಗಿ ಪ್ರಾರಂಭಿಸುತ್ತೇವೆ, ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಗೆದ್ದು ಉತ್ತಮ ಫಲಿತಾಂಶದೊಂದಿಗೆ ಹೊಸ ವರ್ಷಕ್ಕೆ ಕಾಲಿಡಲಿದ್ದೇವೆ" ಎಂದು ವಾರ್ನರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸದ್ಯ ತರಬೇತಿ ಪಡೆಯುತ್ತಿರುವ ವಾರ್ನರ್ ಮುಂದಿನ ವಾರದಲ್ಲಿ ಸಂಪೂರ್ಣವಾಗಿ ಫಿಟ್ ಆಡುವ ಸಾಧ್ಯತೆ ಇದ್ದು, ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ವಿಶ್ವಾಸವಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.