ಅಹಮದಾಬಾದ್ (ಗುಜರಾತ್): ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಂದಿನಿಂದ ಪ್ರಾರಂಭವಾಗುವ 4ನೇ ಟೆಸ್ಟ್ ಪಂದ್ಯಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ.
ಕೊಹ್ಲಿ ಅವರು ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 42 ಸೆಕೆಂಡುಗಳ ವಿಡಿಯೋದಲ್ಲಿ, ಭರ್ಜರಿ ತಯಾರಿ ನಡೆಸುತ್ತಿರುವುದು ಕಂಡು ಬಂದಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಪಿಚ್ ಕುರಿತ ಚರ್ಚೆಯು ಪ್ರಮುಖ ಪಾತ್ರ ಪಡೆದುಕೊಂಡಿದ್ದರೆ, ಕೊಹ್ಲಿ ಬಾಯ್ಸ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಪಟ್ಟ ಪಡೆಯಲು ಹವಣಿಸುತ್ತಿದೆ.
-
❤️...🏏 pic.twitter.com/k6TVOljuIA
— Virat Kohli (@imVkohli) March 3, 2021 " class="align-text-top noRightClick twitterSection" data="
">❤️...🏏 pic.twitter.com/k6TVOljuIA
— Virat Kohli (@imVkohli) March 3, 2021❤️...🏏 pic.twitter.com/k6TVOljuIA
— Virat Kohli (@imVkohli) March 3, 2021
ಒಂದು ವೇಳೆ ಭಾರತವು ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯವನ್ನು ಗೆದ್ದರೆ, ಡಬ್ಲ್ಯುಟಿಸಿಯ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಈ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಸೆಣಸಾಡಲಿದ್ದಾರೆ.
ಒಟ್ಟು ನಡೆದ ಮೂರು ಪಂದ್ಯಗಳಲ್ಲಿ ಕೊಹ್ಲಿ ಪಡೆ ಎರಡು ಪಂದ್ಯಗಳನ್ನು ಗೆದ್ದಿದೆ.