ಮುಂಬೈ: ಮುಂಬರುವ ಫೆಬ್ರವರಿ 21 ರಿಂದ ಆರಂಭವಾಗಲಿರುವ ಮಹಿಳಾ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಬಿಸಿಸಿಐ 15 ಆಟಗಾರರ ತಂಡವನ್ನು ಪ್ರಕಟಿಸಿದೆ.
-
📢Squad Announcement📢@ImHarmanpreet will lead India's charge at @T20WorldCup #T20WorldCup #TeamIndia pic.twitter.com/QkpyypyJKc
— BCCI Women (@BCCIWomen) January 12, 2020 " class="align-text-top noRightClick twitterSection" data="
">📢Squad Announcement📢@ImHarmanpreet will lead India's charge at @T20WorldCup #T20WorldCup #TeamIndia pic.twitter.com/QkpyypyJKc
— BCCI Women (@BCCIWomen) January 12, 2020📢Squad Announcement📢@ImHarmanpreet will lead India's charge at @T20WorldCup #T20WorldCup #TeamIndia pic.twitter.com/QkpyypyJKc
— BCCI Women (@BCCIWomen) January 12, 2020
ಟೀಂ ಇಂಡಿಯಾ ಸ್ಟಾರ್ ಆಟಗಾರ್ತಿ ಹರ್ಮನ್‌ಪ್ರೀತ್ ಕೌರ್‌ಗೆ ತಂಡದ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ. ಬಂಗಾಳದ ಯುವ ಪ್ರತಿಭೆ ರಿಚಾ ಘೋಷ್ ತಂಡದಲ್ಲಿ ಸ್ಥಾನ ಪಡೆದಿದ್ದು, ಉಳಿದಂತೆ ಯಾವುದೇ ಅಚ್ಚರಿಯ ಆಯ್ಕೆ ಕಂಡುಬಂದಿಲ್ಲ.
ಭವಿಷ್ಯದ ಭಾರತ ಮಹಿಳಾ ಕ್ರಿಕೆಟ್ ತಂಡದ ತಾರೆಯಾಗಿ ಹೊರಹೊಮ್ಮಿರುವ ಹರಿಯಾಣ ಮೂಲದ 15 ವರ್ಷದ ಶಾಲಾ ಬಾಲಕಿ ಶಫಾಲಿ ವರ್ಮಾ, ಚೊಚ್ಚಲ ಅಂತರಾಷ್ಟ್ರೀಯ ವಿಶ್ವಕಪ್ ಟೂರ್ನಿ ಆಡಲಿದ್ದಾರೆ. ಇಲ್ಲಿಯವರೆಗೂ ಭಾರತದ ಪರ 9 ಟಿ-20 ಪಂದ್ಯಗಳನ್ನು ಆಡಿರುವ ಶಫಾಲಿ ವರ್ಮಾ 222 ರನ್ ಸಿಡಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ಮಹಿಳಾ ಪಡೆ ವಿರುದ್ಧ ಸೆಣಸಲಿದೆ. ಆಸ್ಟ್ರೇಲಿಯಾ ಹೊರತಾಗಿ ಗ್ರೂಪ್ ಹಂತದಲ್ಲಿ ಬಾಂಗ್ಲಾದೇಶ, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ತಂಡಗಳ ವಿರುದ್ಧವೂ ಕಾದಾಡಲಿದೆ.
ಟಿ-20 ವಿಶ್ವಕಪ್ಗೂ ಮೊದಲು ಭಾರತ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ತ್ರಿಕೋನ ಸರಣಿಯಲ್ಲಿ ವನಿತೆಯರು ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾಯಕಿ ಹರ್ಮನ್‌ಪ್ರೀತ್ ಕೌರ್, ವಿಶ್ವಕಪ್‌ಗೆ ಮುಂಚಿತವಾಗಿ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವುದು ಸಂತಸ ತಂದಿದೆ. ಈ ಟೂರ್ನಿ ಟಿ-20 ವಿಶ್ವಕಪ್ ಪಂದ್ಯಗಳಿಗಾಗಿ ನಮ್ಮ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ನೆರವಾಗಲಿದೆ ಎಂದಿದ್ದಾರೆ.
ಟಿ-20 ವಿಶ್ವಕಪ್ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನಾ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ವೇದ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯಾ, ಪೂನಂ ಯಾದವ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ, ಪೂಜಾ ವಸ್ತ್ರಕಾರ್, ಅರುಂಧತಿ ರೆಡ್ಡಿ.
ತ್ರಿಕೋನ ಸರಣಿಗೆ ಆಯ್ಕೆಯಾದ 16 ಆಟಗಾರ್ತಿಯರ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ವೇದ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯಾ, ಪೂನಂ ಯಾದವ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಕಾರ್, ಅರುಂಧತಿ ರೆಡ್ಡಿ, ನುಝಾಹತ್ ಪರ್ವೀನ್