ಲಂಡನ್: ಹಲವು ನೂತನ ದಾಖಲೆಗಳನ್ನ ನಿರ್ಮಾಣ ಮಾಡಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ದಾಖಲೆ ನಿರ್ಮಾಣ ಮಾಡುವ ಸನಿಹದಲ್ಲಿದ್ದಾರೆ.
ಈಗಾಗಲೆ ಏಕದಿನ ಕ್ರಿಕೆಟ್ನಲ್ಲಿ ವೇಗವಾಗಿ 10 ಸಾವಿರ ರನ್ ಪೂರೈಸಿರುವ ವಿರಾಟ್ ಕೊಹ್ಲಿ 57 ರನ್ಗಳಿಸಿದ್ರೆ ವೇಗವಾಗಿ 11 ಸಾವಿರ ರನ್ ಗಳಿಸಿದ ಆಟಗಾರ ಎಂಬ ದಾಖಲೆ ಬರೆಯಲಿದ್ದಾರೆ. ಸದ್ಯ 221 ಇನ್ನಿಂಗ್ಸ್ನಲ್ಲಿ ಕೊಹ್ಲಿ 10,943 ರನ್ ಗಳಿಸಿದ್ದಾರೆ. ಅಲ್ಲದೆ, ಏಕದಿನ ಕ್ರಿಕೆಟ್ನಲ್ಲಿ ಸಚಿನ್ ತೆಂಡೂಲ್ಕರ್ ಮತ್ತು ಸೌರವ್ ಗಂಗೂಲಿ ನಂತರ 11 ಸಾವಿರ ರನ್ ಗಳಿಸಿದ ಭಾರತದ ಮೂರನೇ ಆಟಗಾರ ಎಂಬ ದಾಖಲೆ ನಿರ್ಮಾಣ ಮಾಡಲಿದ್ದಾರೆ.
ಕೊಹ್ಲಿ ಏನಾದ್ರೂ ಇಂದಿನ ಪಂದ್ಯದಲ್ಲಿ ಶತಕ ಗಳಿಸಿದ್ರೆ ನ್ಯೂಜಿಲ್ಯಾಂಡ್ ವಿರುದ್ಧ 6 ಶತಕ ಸಿಡಿಸಿದ ಮೂರನೇ ಆಟಗಾರ ಎಂಬ ದಾಖಲೆ ನಿರ್ಮಾಣ ಮಾಡಲಿದ್ದಾರೆ. ವೀರೇಂದ್ರ ಸೆಹ್ವಾಗ್ ಮತ್ತು ರಿಕಿ ಪಾಂಟಿಂಗ್ 6 ಶತಕ ಸಿಡಿಸಿದ್ದು, ಕೊಹ್ಲಿ 5 ಶತಕ ಸಿಡಿಸಿದ್ದಾರೆ.