ಇಸ್ಲಮಾಬಾದ್: 2019 ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರುತ್ತಿರುವ ಪಾಕ್ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಕ್ರಿಕೆಟ್ ಆಟಗಾರ ಕಮ್ರಾನ್ ಅಕ್ಮಲ್ ಮನವಿ ಮಾಡಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಪಾಕ್ ತಂಡದ ಮೇಲೆ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕಮ್ರಾನ್ ಅಕ್ಮಲ್ ಆಕ್ರೋಶಗೊಂಡಿದ್ದಾರೆ. ಪಾಕ್ ಪ್ರಧಾನಿ ಮತ್ತು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಪೋಷಕ ಇಮ್ರಾನ್ ಖಾನ್ ಅವರಿಗೆ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ನಮ್ಮ ದೇಶದಲ್ಲಿ ಅನೇಕ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಿದ್ದಾರೆ. ಸಾಮರ್ಥ್ಯಕ್ಕೆ ಅನುಗುಣವಾಗಿ ಆಟಗಾರರನ್ನು ಆಯ್ಕೆ ಮಾಡಿದ್ದೇ ಆದಲ್ಲಿ, ಪಾಕ್ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಶಕ್ತಿ ಮತ್ತಷ್ಟು ಹೆಚ್ಚಾಗಲಿದೆ ಎಂದಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ತಂಡ ಹಿನ್ನಡೆ ಅನುಭವಿಸಿದ್ದು, ಆಡಿರುವ 5 ಪಂದ್ಯಗಳಲ್ಲಿ 1ರಲ್ಲಿ ಜಯಗಳಿಸಿದ್ದು, 3 ಪಂದ್ಯದಲ್ಲಿ ಸೊಲು ಕಂಡಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿದೆ.