ಮ್ಯಾಂಚೆಸ್ಟರ್: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ನ 34ನೇ ಪಂದ್ಯಕ್ಕೆ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನ ಸಿದ್ಧವಿದ್ದು, ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಕಾದಾಟದಲ್ಲಿ ರನ್ ಹೊಳೆಯೇ ಹರಿಯುವ ನಿರೀಕ್ಷೆ ಇದೆ.
ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವಕಪ್ನ ನಾಲ್ಕನೇ ಪಂದ್ಯ ಇದಾಗಿದ್ದು, ಇಲ್ಲಿಯವರೆಗೂ ನಡೆದ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡಗಳೇ ಗೆಲುವು ಸಾಧಿಸಿವೆ.
ಇದೇ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ನಡೆಸಿ ಪಾಕಿಸ್ತಾನದ ವಿರುದ್ಧ ಭಾರತ ಜಯಗಳಿತ್ತು. ಇತ್ತ ವೆಸ್ಟ್ ಇಂಡೀಸ್ ಕೂಡ ಇದೇ ಮೈದಾನದಲ್ಲಿ ನ್ಯೂಜಿಲ್ಯಾಂಡ್ವಿರುದ್ಧ ಸೋಲು ಕಂಡಿತ್ತು. ಎರಡೂ ತಂಡಗಳು ಪಿಚ್ ಕಂಡೀಷನ್ ಬಗ್ಗೆ ತಿಳಿದುಕೊಂಡಿದ್ದು, ಬ್ಯಾಟಿಂಗ್ ಸ್ನೇಹಿ ಮೈದಾನದಲ್ಲಿ ರನ್ ಹೊಳೆ ಹರಿಯುವ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ ಇಂದು ಮ್ಯಾಂಚೆಸ್ಟರ್ನಲ್ಲಿ ಮಳೆ ಬರುವ ಸಾಧ್ಯತೆ ಕಡಿಮೆ ಇದ್ದು, ಸಂಪೂರ್ಣ ಪಂದ್ಯವನ್ನ ನಿರೀಕ್ಷಿಸಬಹುದಾಗಿದೆ.