ನವದೆಹಲಿ: ಕ್ರಿಕೆಟಿಗ ಪಿಯೂಷ್ ಚಾವ್ಲಾರ ತಂದೆ ಪ್ರಮೋದ್ ಚಾವ್ಲಾ ಕೊರೊನಾ ವೈರಸ್ಗೆ ತುತ್ತಾಗಿದ್ದಾರೆ.
ಪ್ರಮೋದ್ ಚಾವ್ಲಾ ಅನಾರೋಗ್ಯದಿಂದ ಬಳಲುತ್ತಿದ್ದರು. ಬಳಿಕ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹಾಗಾಗಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ಅವರ ಕುಟುಂಬಸ್ಥರು ಪ್ರಮೋದ್ರನ್ನು ದೆಹಲಿಗೆ ಕರೆದೊಯ್ಯಿದ್ದರು. ಆದ್ರೂ ಸಹ ಅವರು ಬದುಕುಳಿದಿಲ್ಲ.
ಪಿಯುಷ್ ಚಾವ್ಲಾ ತಮ್ಮ ತಂದೆಯ ನಿಧನದ ಸುದ್ದಿಯನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಅಪ್ಪ ಮೇ 10ರಂದು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವೆ’ ಅಂತಾ ಭಾವುಕರಾಗಿ ಬರೆದುಕೊಂಡಿದ್ದಾರೆ.