ರಾಜ್‌ಕೋಟ್: ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ತಮ್ಮ ಪತ್ನಿ ರಿವಾಬಾ ಜೊತೆ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.
ಇಂಗ್ಲೆಂಡ್ನಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿರುವ ಜಡೇಜಾ ವ್ಯಾಕ್ಸಿನ್ ಪಡೆದರು.
ಜಡೇಜಾಗಿಂತ ಮುಂಚೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ವೇಗಿಗಳಾದ ಉಮೇಶ್ ಯಾದವ್, ಇಶಾಂತ್ ಶರ್ಮಾ, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ ಹಾಗು ಪಂತ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.