ಮುಂಬೈ: ಕಳೆದ ವರ್ಷದ ಅಂತ್ಯದಲ್ಲಿ ದೆಹಲಿಯಿಂದ ಹರಿಯಾಣಕ್ಕೆ ತೆರಳುತ್ತಿದ್ದಾಗ ಹರಿದ್ವಾರ ಜಿಲ್ಲೆಯ ರೂರ್ಕಿ ಬಳಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ನಡೆದ ಭೀಕರ ಅಪಘಾತದಲ್ಲಿ ಯುವ ಕ್ರಿಕೆಟಿಗ ರಿಷಬ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಹರಿಯಾಣದಲ್ಲಿ ಚಿಕಿತ್ಸೆ ನೀಡಿದ ಬಳಿಕ ಏರ್ಲಿಫ್ಟ್ ಮೂಲಕ ಮುಂಬೈನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ಪಂತ್ ತುಸು ಚೇತರಿಸಿಕೊಂಡಿದ್ದಾರೆ. ಊರುಗೋಲಿನ ಸಹಾಯದಿಂದ ನಡೆದಾಡುತ್ತಿರುವ ಚಿತ್ರಗಳನ್ನು ಅವರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭರವಸೆಯ ಕ್ರಿಕೆಟಿಗ ಪಂತ್ ಕಾರು ಅಪಘಾತದಿಂದ ಭಾರತದ ಕ್ರೀಡಾಲೋಕವನ್ನೇ ಆತಂಕಕ್ಕೀಡು ಮಾಡಿತ್ತು. ಯುವ ಕ್ರಿಕೆಟಿಗ ಚೇತರಿಸಿಕೊಳ್ಳಲಿ ಎಂದು ಕ್ರಿಕೆಟಿಗರು ಉಜ್ಜಯಿನಿಯ ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ್ದರು. ಇದೀಗ ಕ್ರಿಕೆಟಿಗ ನಡೆದಾಡಲು ಆರಂಭಿಸಿದ್ದಾರೆ.
-
One step forward
— Rishabh Pant (@RishabhPant17) February 10, 2023 " class="align-text-top noRightClick twitterSection" data="
One step stronger
One step better pic.twitter.com/uMiIfd7ap5
">One step forward
— Rishabh Pant (@RishabhPant17) February 10, 2023
One step stronger
One step better pic.twitter.com/uMiIfd7ap5One step forward
— Rishabh Pant (@RishabhPant17) February 10, 2023
One step stronger
One step better pic.twitter.com/uMiIfd7ap5
ಅಂದು ನಡೆದ ಭೀಕರ ಅಪಘಾತ: ಕ್ರಿಕೆಟಿಗ ರಿಷಭ್ ಪಂತ್ ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ಮನೆಗೆ (ಡಿಸೆಂಬರ್ 30) ಹೋಗುತ್ತಿದ್ದಾಗ ಬೆಳಗಿನ ಜಾವ 5.30 ರ ಸುಮಾರಿನಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿತ್ತು. ಬೆಂಕಿ ಹೊತ್ತಿಕೊಂಡು ಕಾರು ಸುಟ್ಟು ಕರಕಲಾಗಿತ್ತು. ಪಂತ್ ಗಾಯಗೊಂಡಿದ್ದರೂ ಕಾರಿನ ಗಾಜು ಹೊಡೆದು ಹೊರಬಿದ್ದು ಪ್ರಾಣ ಉಳಿಸಿಕೊಂಡಿದ್ದರು. ಸುದೈವವಶಾತ್ ಇದೇ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಸೇರಿ ಆಂಬ್ಯುಲೆನ್ಸ್ಗೆ ಕರೆಮಾಡಿ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ಪಂತ್ರನ್ನು ಸೇರಿಸಿದ್ದರು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ ಏರ್ ಲಿಫ್ಟ್ ಮಾಡಲಾಗಿತ್ತು. ಇಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಪಂತ್ರ ಹಣೆ ಮೇಲೆ ಎರಡು ಗಾಯ, ಬಲ ಮೊಣಕಾಲು, ಪಾದ ಮತ್ತು ಬೆನ್ನಿನ ಅಸ್ಥಿರಜ್ಜುವಿಗೆ ಪೆಟ್ಟಾಗಿತ್ತು ಎಂದು ಬಿಸಿಸಿಐ ತಿಳಿಸಿತ್ತು. ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದ ಪಂತ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ರಿಷಬ್ ಪಂತ್ ಬೇಗ ಗುಣಮುಖರಾಗಲೆಂದು ಮಹಾಕಾಳೇಶ್ವರನಿಗೆ ಭಾರತೀಯ ಕ್ರಿಕೆಟಿಗರ ವಿಶೇಷ ಪೂಜೆ