ETV Bharat / sports

ಟೆಸ್ಟ್​ ತಂಡದ ನಾಯಕತ್ವಕ್ಕೂ ರಾಜೀನಾಮೆ ಘೋಷಿಸಿದ ಕೊಹ್ಲಿ.. ದಾಖಲೆಗಳ ವೀರ ಬರೆದ್ರು ಭಾವನಾತ್ಮಕ ಪತ್ರ - ಟೆಸ್ಟ್ ನಾಯಕತ್ವ ತ್ಯಜಿಸಿದ ವಿರಾಟ್​

Virat Kohli Steps Down as Test Captain: ಟೀಂ ಇಂಡಿಯಾ ಟೆಸ್ಟ್​ ನಾಯಕತ್ವದಿಂದ ವಿರಾಟ್​ ಕೊಹ್ಲಿ ಕೆಳಗಿಳಿದಿದ್ದಾರೆ. ಈ ಹಿಂದೆ ಟಿ-20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದ ಅವರನ್ನ ಏಕದಿನದಿಂದಲೂ ಕೆಳಗಿಳಿಸಲಾಗಿತ್ತು.

Cricketer Virat Kohli steps down as India Test captain

author img

By

Published : Jan 15, 2022, 7:06 PM IST

Updated : Jan 15, 2022, 7:43 PM IST

ಹೈದರಾಬಾದ್​: ಟೀಂ ಇಂಡಿಯಾದ ಅದ್ಭುತ ಆಟಗಾರ, ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಟೆಸ್ಟ್ ತಂಡದ ನಾಯಕನ ಸ್ಥಾನಕ್ಕೂ ದಿಢೀರ್​ ರಾಜೀನಾಮೆ ನೀಡಿದ್ದಾರೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಯಲ್ಲಿ ಸೋಲು ಕಂಡ ಬೆನ್ನಲ್ಲೇ 33 ವರ್ಷದ ವಿರಾಟ್ ಕೊಹ್ಲಿ ತಮ್ಮ ನಿರ್ಧಾರವನ್ನು ಟ್ವಿಟ್ಟರ್​ನಲ್ಲಿ ಪ್ರಕಟಿಸಿದ್ದಾರೆ.

ಭಾವನಾತ್ಮಕ ಪತ್ರ ಬರೆದ ವಿರಾಟ್​..

'ಇಷ್ಟು ದೀರ್ಘಾವಧಿವರೆಗೆ ನನ್ನ ದೇಶವನ್ನ ಮುನ್ನಡೆಸಲು ಅವಕಾಶ ನೀಡಿದ ಬಿಸಿಸಿಐಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅದಕ್ಕಿಂತಲೂ ಮುಖ್ಯವಾಗಿ ಆರಂಭದ ದಿನದಿಂದಲೂ ತಂಡದ ಹಿತದೃಷ್ಟಿಯಿಂದ ಎಂತಹ ಪರಿಸ್ಥಿತಿಯಲ್ಲೂ ನನ್ನ ಕೈ ಬಿಡದ ಆಟಗಾರರಿಗೆ ಧನ್ಯವಾದಗಳು' ಎಂದಿದ್ದಾರೆ.

'ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು 7 ವರ್ಷಗಳ ಕಠಿಣ ಪರಿಶ್ರಮ, ನಿರಂತರ ಪ್ರಯತ್ನದ ದಿನವಾಗಿದೆ. ನನಗೆ ನೀಡಿರುವ ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಪ್ರತಿಯೊಂದೂ ಕೊನೆಗೊಳ್ಳಬೇಕು. ಇದೀಗ ಭಾರತ ಟೆಸ್ಟ್ ನಾಯಕನಾಗಿ ಕೊನೆಗೊಳ್ಳಬೇಕಾಗಿದೆ' ಎಂದಿದ್ದಾರೆ.

2014ರಲ್ಲಿ ಟೆಸ್ಟ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ ವಿರಾಟ್​ ಕೊಹ್ಲಿಗೆ ಆ ಜವಾಬ್ದಾರಿ ನೀಡಲಾಗಿತ್ತು. 2014ರಿಂದ 2022ರ ಅವಧಿಯಲ್ಲಿ ಒಟ್ಟು 68 ಟೆಸ್ಟ್​ ಪಂದ್ಯಗಳಲ್ಲಿ ಭಾರತ ಮುನ್ನಡೆಸಿರುವ ಡೆಲ್ಲಿ ಡ್ಯಾಶರ್​​ 40 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದಾರೆ. ಕ್ಯಾಪ್ಟನ್ ಆಗಿ ಶೇ. 58.82ರಷ್ಟು ಗೆಲುವಿನ ದಾಖಲೆ ಹೊಂದಿದ್ದಾರೆ.

Virat Kohli Steps Down as Captain
2014ರಲ್ಲಿ ಟೆಸ್ಟ್​ ತಂಡದ ನಾಯಕನಾಗಿದ್ದ ವಿರಾಟ್​​

2018-19ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​​ ಸರಣಿಯಲ್ಲಿ ಐತಿಹಾಸಿಕ ಜಯ ಸಾಧಿಸುವ ಮೂಲಕ ಭಾರತಕ್ಕೆ ಅಮೋಘ ಕೊಡುಗೆ ನೀಡಿದ್ದಾರೆ. ಕಳೆದ ವರ್ಷ ಇಂಗ್ಲೆಂಡ್​ನಲ್ಲಿ ನಡೆದ ಟೆಸ್ಟ್​​​ ಸರಣಿಯಲ್ಲೂ ಜಯಭೇರಿ ಭಾರಿಸಿದ್ದಾರೆ. ಆದರೆ, ದಕ್ಷಿಣ ಆಫ್ರಿಕಾದಲ್ಲಿ ಐತಿಹಾಸಿಕ ಟೆಸ್ಟ್​​ ಸರಣಿ ಗೆಲ್ಲುವ ಅವರ ಆಸೆ ಮಾತ್ರ ಈಡೇರಲಿಲ್ಲ. ಇದರ ಬೆನ್ನಲ್ಲೇ ಈ ನಿರ್ಧಾರ ಕೈಗೊಂಡಿದ್ದಾರೆ.

ಐಸಿಸಿ ಟಿ-20 ವಿಶ್ವಕಪ್​ ಮುಗಿಯುತ್ತಿದ್ದಂತೆ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್​ನಿಂದ ಕೆಳಗಿಳಿಯುವುದಾಗಿ ಘೋಷಿಸಿ, ನಾಯಕತ್ವದಿಂದ ಹೊರಬಂದಿದ್ದರು. ಇದರ ಬೆನ್ನಲ್ಲೇ ಅವರನ್ನ ಏಕದಿನ ನಾಯಕತ್ವದಿಂದಲೂ ಕೆಳಗಿಳಿಸಿ ಆ ಸ್ಥಾನಕ್ಕೆ ರೋಹಿತ್ ಶರ್ಮಾ ಅವರನ್ನ ಆಯ್ಕೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ವಿರಾಟ್​ ಪಡೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿತ್ತು. ಸರಣಿ ಮುಗಿಯುತ್ತಿದ್ದಂತೆ ಡೆಲ್ಲಿ ಡ್ಯಾಶರ್ ಈ ನಿರ್ಧಾರ ಪ್ರಕಟಿಸಿದ್ದಾರೆ.

Last Updated : Jan 15, 2022, 7:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.