ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಭೀಕರ ರೈಲು ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಬಾಲಸೋರ್ನಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಈವರೆಗೆ 261 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ. ಸಾವಿರಾರು ಜನರು ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರ ಜೊತೆಗೆ ಕ್ರಿಕೆಟ್ ದಿಗ್ಗಜರು ಕೂಡ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಟ್ವೀಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ವಿರಾಟ್ ಕೊಹ್ಲಿ ಟ್ವೀಟ್: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ನನಗೆ ತೀವ್ರ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗಾಗಿ ನಾನು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ.
-
Saddened to hear about the tragic train accident in Odisha. My thoughts and prayers go out to the families who lost their loved ones and wishing a speedy recovery to the injured.
— Virat Kohli (@imVkohli) June 3, 2023 " class="align-text-top noRightClick twitterSection" data="
">Saddened to hear about the tragic train accident in Odisha. My thoughts and prayers go out to the families who lost their loved ones and wishing a speedy recovery to the injured.
— Virat Kohli (@imVkohli) June 3, 2023Saddened to hear about the tragic train accident in Odisha. My thoughts and prayers go out to the families who lost their loved ones and wishing a speedy recovery to the injured.
— Virat Kohli (@imVkohli) June 3, 2023
ಗೌತಮ್ ಗಂಭೀರ್ ಪ್ರತಿಕ್ರಿಯೆ: "ಒಡಿಶಾದಲ್ಲಿ ಅಪಾರ ಪ್ರಾಣಹಾನಿ ಸಂಭವಿಸಿದೆ. ಸಂತ್ರಸ್ತ ಕುಟುಂಬಗಳಿಗೆ ದೇವರು ಶಕ್ತಿ ನೀಡಲಿ. ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಷ್ಟ್ರ ನಿಮ್ಮೊಂದಿಗೆ ನಿಂತಿದೆ" ಎಂದು ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಟ್ವೀಟ್ ಮಾಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ.
-
Devastated by the loss of lives in Odisha. May god give strength to the families of victims. Wishing speedy recovery to those injured. Nation stands with you.
— Gautam Gambhir (@GautamGambhir) June 3, 2023 " class="align-text-top noRightClick twitterSection" data="
">Devastated by the loss of lives in Odisha. May god give strength to the families of victims. Wishing speedy recovery to those injured. Nation stands with you.
— Gautam Gambhir (@GautamGambhir) June 3, 2023Devastated by the loss of lives in Odisha. May god give strength to the families of victims. Wishing speedy recovery to those injured. Nation stands with you.
— Gautam Gambhir (@GautamGambhir) June 3, 2023
ಇದನ್ನೂ ಓದಿ: ಒಡಿಶಾ ರೈಲು ದುರಂತ: ಸಹಾಯವಾಣಿ ಆರಂಭ, ಬೆಂಗಳೂರಿನಿಂದ ಹೊರಡುವ ರೈಲುಗಳು ರದ್ದು.. ಹಲವರ ಪರದಾಟ!
ವೀರೇಂದ್ರ ಸೆಹ್ವಾಗ್ ಸಂತಾಪ: "ಒಡಿಶಾದಲ್ಲಿ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ದುರಂತ ಕೇಳಿದಾಗ ಅತ್ಯಂತ ದುಃಖವಾಯಿತು. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿರುವ ಎಲ್ಲ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ ಮತ್ತು ಗಾಯಗೊಂಡವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತಿದ್ದೇನೆ" ಎಂದು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಂತಾಪ ಸೂಚಿಸಿದ್ದಾರೆ.
ಹರ್ಭಜನ್ ಸಿಂಗ್ ಟ್ವೀಟ್: "ಒಡಿಶಾದಲ್ಲಿ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಇನ್ನೊಂದು ಪ್ಯಾಸೆಂಜರ್ ರೈಲಿನ ನಡುವೆ ಸಂಭವಿಸಿದ ಭೀಕರ ಅಪಘಾತದ ಬಗ್ಗೆ ತಿಳಿದು ನೋವಾಗಿದೆ. ನನ್ನ ಪ್ರಾರ್ಥನೆಗಳು ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡವರ ಕುಟುಂಬಗಳೊಂದಿಗೆ ಇರುತ್ತವೆ. ಒಡಿಶಾದ ಸರ್ಕಾರ ಆದಷ್ಟು ಬೇಗ ಪ್ರಯಾಣಿಕರನ್ನು ರಕ್ಷಿಸಿ" ಎಂದು ಕ್ರಿಕೆಟಿಗ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.
-
#BalasoreTrainAccident | As per the information received till now, there are 261 casualties. Injured passengers have been taken to the Hospitals of Gopalpur, Khantapara, Balasore, Bhadrak and Soro: South Eastern Railway#OdishaTrainAccident pic.twitter.com/s3ax03jr3n
— ANI (@ANI) June 3, 2023 " class="align-text-top noRightClick twitterSection" data="
">#BalasoreTrainAccident | As per the information received till now, there are 261 casualties. Injured passengers have been taken to the Hospitals of Gopalpur, Khantapara, Balasore, Bhadrak and Soro: South Eastern Railway#OdishaTrainAccident pic.twitter.com/s3ax03jr3n
— ANI (@ANI) June 3, 2023#BalasoreTrainAccident | As per the information received till now, there are 261 casualties. Injured passengers have been taken to the Hospitals of Gopalpur, Khantapara, Balasore, Bhadrak and Soro: South Eastern Railway#OdishaTrainAccident pic.twitter.com/s3ax03jr3n
— ANI (@ANI) June 3, 2023
ಪರಿಹಾರ ಘೋಷಿಸಿದ ಪ್ರಧಾನಿ ಮೋದಿ: ಪ್ರಧಾನಿ ನರೇಂದ್ರ ಮೋದಿಯವರು ಮೃತರ ಕುಟುಂಬಗಳುಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. ಮೃತರ ಸಂಬಂಧಿಕರಿಗೆ ತಲಾ 10 ಲಕ್ಷ ಮತ್ತು ಗಂಭೀರ ಗಾಯಗೊಂಡವರಿಗೆ ತಲಾ 2 ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಇದನ್ನೂ ಓದಿ: ಕೋರಮಂಡಲ್ಗೆ ರೈಲಿಗೆ 'ಕರಾಳ ಶುಕ್ರವಾರ': 14 ವರ್ಷಗಳ ಹಿಂದೆ ಹಳಿತಪ್ಪಿ ನಡೆದಿತ್ತು ದುರಂತ!