ಕಾಬೂಲ್(ಅಫ್ಘಾನಿಸ್ತಾನ): ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕ್ರಿಕೆಟ್ ಸೇರಿದಂತೆ ಇತರೆ ಕ್ರೀಡೆಗಳನ್ನು ಆಡಲು ಅನುಮತಿ ನೀಡುವುದಿಲ್ಲ ಎಂದು ತಾಲಿಬಾನ್ ಈಗಾಗಲೇ ಕಟ್ಟಪ್ಪಣೆ ಹೊರಡಿಸಿದೆ. ಈ ಬೆನ್ನಲ್ಲೇ ಕ್ರಿಕೆಟ್ ಆಸ್ಟ್ರೇಲಿಯಾ ಮಹತ್ವದ ನಿರ್ಧಾರ ಕೈಗೊಂಡಿದೆ.
ಒಂದು ವೇಳೆ ತಾಲಿಬಾನ್ ಮಹಿಳಾ ಕ್ರಿಕೆಟ್ ಬ್ಯಾನ್ ಮಾಡಿದ್ರೆ, ನಾವು ಅಫ್ಘಾನಿಸ್ತಾನ ಪುರುಷ ತಂಡದೊಂದಿಗೆ ನಡೆಯಬೇಕಿರುವ ಏಕೈಕ ಟೆಸ್ಟ್ ಪಂದ್ಯದಲ್ಲೂ ಭಾಗಿಯಾಗುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ.
-
An update on the proposed Test match against Afghanistan ⬇️ pic.twitter.com/p2q5LOJMlw
— Cricket Australia (@CricketAus) September 9, 2021 " class="align-text-top noRightClick twitterSection" data="
">An update on the proposed Test match against Afghanistan ⬇️ pic.twitter.com/p2q5LOJMlw
— Cricket Australia (@CricketAus) September 9, 2021An update on the proposed Test match against Afghanistan ⬇️ pic.twitter.com/p2q5LOJMlw
— Cricket Australia (@CricketAus) September 9, 2021
ಈ ಕುರಿತಾಗಿ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಜಾಗತಿಕವಾಗಿ ಮಹಿಳೆಯರು ಎಲ್ಲ ವಿಭಾಗಗಳಲ್ಲೂ ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಕ್ರಿಕೆಟ್ ಸೇರಿದಂತೆ ಎಲ್ಲ ವಿಭಾಗದ ಕ್ರೀಡೆಗಳಲ್ಲಿ ಅವರನ್ನು ಬೆಂಬಲಿಸುವುದು ಆಸ್ಟ್ರೇಲಿಯಾದ ಆದ್ಯ ಕರ್ತವ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಮಹಿಳಾ ಕ್ರಿಕೆಟ್ಗೆ ನಿಷೇಧ ಹೇರಿದರೆ, ನಾವು ಅಫ್ಘಾನಿಸ್ತಾನ ಪುರುಷ ತಂಡದೊಂದಿಗೆ ಟೆಸ್ಟ್ ಕ್ರಿಕೆಟ್ ಆಡುವುದಿಲ್ಲ. ಈ ಟೆಸ್ಟ್ ಪಂದ್ಯ ರದ್ದುಗೊಳಿಸಬೇಕಾಗುತ್ತದೆ ಎಂದು ತಿಳಿಸಿದೆ.
ನವೆಂಬರ್ ತಿಂಗಳಲ್ಲಿ ಅಫ್ಘಾನಿಸ್ತಾನದೊಂದಿಗೆ ಹೋಬರ್ಟ್ನಲ್ಲಿ ಆಸ್ಟ್ರೇಲಿಯಾ ಐತಿಹಾಸಿಕ ಏಕೈಕ ಟೆಸ್ಟ್ ಪಂದ್ಯ ಆಯೋಜಿಸಿದೆ. ಇದೀಗ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಯಾವುದೇ ಕ್ರೀಡೆಗಳನ್ನು ಆಡಲು ಅವಕಾಶವಿಲ್ಲ ಎಂದು ತಾಲಿಬಾನ್ ಆದೇಶ ಹೊರಡಿಸುತ್ತಿದ್ದಂತೆ ಕಾಂಗರೂ ದೇಶ ಈ ನಿರ್ಧಾರ ಕೈಗೊಂಡಿದೆ.
ಕಳೆದ ಎರಡು ದಿನಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದರ ಬೆಳವಣಿಗೆಯ ನಡುವ ಮಹಿಳೆಯರು ಕ್ರಿಕೆಟ್ ಆಡುವುದು ಅನಿವಾರ್ಯವಲ್ಲ. ಕ್ರಿಕೆಟ್ನಲ್ಲಿ ಅವರು ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿ ಎದುರಿಸಬಹುದು. ಇಸ್ಲಾಂ ಮಹಿಳೆಯರನ್ನು ನೋಡಲು ಅನುಮತಿಸುವುದಿಲ್ಲ ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದ್ದಾನೆ.