ಕಾನ್ಪುರ್:A moment to cherish for @ShreyasIyer15... ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭಗೊಂಡಿದ್ದು, ಭಾರತ ತಂಡದ 11ರ ಬಳಗದಲ್ಲಿ ಸ್ಥಾನ ಪಡೆದಿರುವ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ.
ಟಾಸ್ ಗೆದ್ದ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಶ್ರೇಯಸ್ ಪದಾರ್ಪಣೆ ಬಗ್ಗೆ ನಿನ್ನೆಯೇ ಮಾಧ್ಯಮಗೋಷ್ಠಿಯಲ್ಲಿ ರಹಾನೆ ತಿಳಿಸಿದ್ದರು. ಭಾರತೀಯ ಕ್ರಿಕೆಟ್ನ ದಂತಕತೆ ಸುನಿಲ್ ಗವಾಸ್ಕರ್ ಅವರು ಶ್ರೇಯಸ್ಗೆ ಟೆಸ್ಟ್ ಕ್ಯಾಪ್ ನೀಡಿ ಶುಭ ಕೋರಿದರು. ಈ ವೇಳೆ, ತಂಡದ ಇತರ ಆಟಗಾರರು ಅಯ್ಯರ್ಗೆ ಚಪ್ಪಾಳೆ ಮೂಲಕ ಹುರಿದುಂಬಿಸಿದರು. ಟೆಸ್ಟ್ ಕ್ಯಾಪ್ಗೆ ಮುತ್ತಿಕ್ಕುವ ಮೂಲಕ ಅದನ್ನು ಶ್ರೇಯಸ್ ಮುಡಿಗೇರಿಸಿಕೊಂಡರು.
-
🎥 A moment to cherish for @ShreyasIyer15 as he receives his #TeamIndia Test cap from Sunil Gavaskar - one of the best to have ever graced the game. 👏 👏#INDvNZ @Paytm pic.twitter.com/kPwVKNOkfu
— BCCI (@BCCI) November 25, 2021 " class="align-text-top noRightClick twitterSection" data="
">🎥 A moment to cherish for @ShreyasIyer15 as he receives his #TeamIndia Test cap from Sunil Gavaskar - one of the best to have ever graced the game. 👏 👏#INDvNZ @Paytm pic.twitter.com/kPwVKNOkfu
— BCCI (@BCCI) November 25, 2021🎥 A moment to cherish for @ShreyasIyer15 as he receives his #TeamIndia Test cap from Sunil Gavaskar - one of the best to have ever graced the game. 👏 👏#INDvNZ @Paytm pic.twitter.com/kPwVKNOkfu
— BCCI (@BCCI) November 25, 2021
ಈಗಾಗಲೇ ಮುಂಬೈ ಬ್ಯಾಟರ್ ಶ್ರೇಯಸ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ 81.54ರ ಸ್ಟ್ರೈಕ್ ರೇಟ್ನಲ್ಲಿ 52.18ರ ಸರಾಸರಿಯೊಂದಿಗೆ 4,592 ರನ್ ಗಳಿಸಿದ್ದಾರೆ. 2017ರ ಡಿ. 10ರಂದು ಶ್ರೀಲಂಕಾ ವಿರುದ್ಧ ಅವರು ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಇದೀಗ ನಾಲ್ಕು ವರ್ಷಗಳ ಬಳಿಕ ಅವರು ದೀರ್ಘ ಮಾದರಿಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಇದನ್ನೂ ಓದಿ: IND vs NZ: ಕಿವೀಸ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ