ETV Bharat / sports

ODI Rankings: ರೋಹಿತ್​, ಕೊಹ್ಲಿ ಶ್ರೇಯಾಂಕದಲ್ಲಿ ಕುಸಿತ; 13ನೇ ಸ್ಥಾನಕ್ಕೆ ಶಿಖರ್​ ಲಗ್ಗೆ

ವೆಸ್ಟ್​ ಇಂಡೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಶಿಖರ್ ಧವನ್ ಹಾಗೂ ಶ್ರೇಯಸ್ ಅಯ್ಯರ್ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಚೇತರಿಕೆ ಕಂಡಿದ್ದಾರೆ.

author img

By

Published : Jul 27, 2022, 7:18 PM IST

ICC ODI rankings
ICC ODI rankings

ದುಬೈ: ಐಸಿಸಿ ಏಕದಿನ ಶ್ರೇಯಾಂಕ ರಿಲೀಸ್​ ಆಗಿದ್ದು, ನೂತನ ಪಟ್ಟಿ ಪ್ರಕಾರ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್​ ಕೊಹ್ಲಿ ಒಂದೊಂದು ಸ್ಥಾನ ಕುಸಿತ ಕಂಡಿದ್ದಾರೆ. ವೆಸ್ಟ್​ ಇಂಡೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಶಿಖರ್ ಧವನ್​ 13ನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ.

ಪಾಕಿಸ್ತಾನದ ಕ್ಯಾಪ್ಟನ್​ ಬಾಬರ್​ ಆಜಂ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ರೋಹಿತ್​​ ಹಾಗೂ ವಿರಾಟ್​ ತಲಾ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಶಿಖರ್ ಧವನ್​ 13ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಇದರ ಜೊತೆಗೆ ಶ್ರೇಯಸ್ ಅಯ್ಯರ್​ 6 ಸ್ಥಾನ ಏರಿಕೆ ಕಂಡಿದ್ದು, 54ನೇ ಸ್ಥಾನದಲ್ಲಿದ್ದಾರೆ. ಆಲ್​ರೌಂಡರ್​ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ ಟಾಪ್ 10ರಲ್ಲಿ ಕಾಣಿಸಿಕೊಂಡಿದ್ದಾರೆ. ಬೌಲಿಂಗ್​ ವಿಭಾಗದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: WI vs IND: ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಭಾರತ: ವಿಶ್ವ ದಾಖಲೆಯತ್ತ ಶಿಖರ್ ಧವನ್ ಚಿತ್ತ

ಐಸಿಸಿ ನೂತನ ಟೆಸ್ಟ್​ ಬ್ಯಾಟ್ಸಮನ್​ ಶ್ರೇಯಾಂಕದಲ್ಲೂ ಪಾಕಿಸ್ತಾನದ ಕ್ಯಾಪ್ಟನ್​ ಬಾಬರ್ ಆಜಂ ಗಮನಾರ್ಹ ಚೇತರಿಕೆ ಕಂಡಿದ್ದು, ಮೂರನೇ ಸ್ಥಾನಕ್ಕೆ ಲಗ್ಗೆ ಹಾಕಿದ್ದಾರೆ. ಉಳಿದಂತೆ ಟೆಸ್ಟ್​ ರ್ಯಾಂಕಿಂಗ್​​ನಲ್ಲಿ ರಿಷಭ್ ಪಂತ್​​ 5ನೇ ಸ್ಥಾನದಲ್ಲಿದ್ದು, ರೋಹಿತ್ ಶರ್ಮಾ 9ನೇ ಸ್ಥಾನ ಹಾಗೂ ವಿರಾಟ್​ ಕೊಹ್ಲಿ 12ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.