ಹೈದರಾಬಾದ್: ಮುಂದಿನ ತಿಂಗಳಿಂದ ಆಸ್ಟ್ರೇಲಿಯಾದಲ್ಲಿ ಆರಂಭಗೊಳ್ಳಲಿರುವ ಬಹುನಿರೀಕ್ಷಿತ ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ತಂಡದಲ್ಲಿ ಅನುಭವಿ ಆಟಗಾರ ದಿನೇಶ್ ಕಾರ್ತಿಕ್ಗೆ ಅವಕಾಶ ನೀಡಲಾಗಿದೆ. ಇದರ ಬೆನ್ನಲ್ಲೇ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, 'ಕನಸು ನನಸಾಗಿದೆ' ಎಂದು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
2022ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಿರುವ ದಿನೇಶ್ ಕಾರ್ತಿಕ್ ತಂಡದಲ್ಲಿ ಫಿನಿಶರ್ ಪಾತ್ರ ನಿರ್ವಹಿಸುತ್ತಿದ್ದಾರೆ. ಜೊತೆಗೆ ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಸೇರಿದಂತೆ ವಿವಿಧ ಸರಣಿಗಳಲ್ಲೂ ಅವಕಾಶ ನೀಡಲಾಗಿತ್ತು. ಇದಾದ ಬಳಿಕ ಏಷ್ಯಾಕಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಡಿಕೆ ಇದೀಗ ಟಿ20 ವಿಶ್ವಕಪ್ನಲ್ಲೂ ಮೈದಾನಕ್ಕಿಳಿಯಲಿದ್ದಾರೆ. ಈ ಮೂಲಕ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಲು ಮತ್ತೊಮ್ಮೆ ಸಜ್ಜಾಗಿದ್ದಾರೆ.
ಟೀಂ ಇಂಡಿಯಾ ಪರ ಹಿಂದೆ 2007ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಪಂದ್ಯವನ್ನಾಡಿದ್ದ ದಿನೇಶ್ ಕಾರ್ತಿಕ್ ತನದಂತರ 2013ರ ಐಸಿಸಿ ಚಾಂಪಿಯನ್ ಟ್ರೋಫಿಯಲ್ಲೂ ಅವಕಾಶ ಪಡೆದುಕೊಂಡಿದ್ದರು. ವಿಶೇಷವೆಂದರೆ ಈ ಎರಡು ಟೂರ್ನಿಗಳಲ್ಲಿ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2004ರಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡಿರುವ ದಿನೇಶ್ ಕಾರ್ತಿಕ್, ಅನೇಕ ಏಳು-ಬೀಳು ಕಂಡಿದ್ದಾರೆ. ತಂಡದಲ್ಲಿ ಅವಕಾಶ ಸಿಗದ ಸಂದರ್ಭದಲ್ಲಿ ಕಾಮೆಂಟರ್ ಆಗಿ ಕಾರ್ಯನಿರ್ವಹಿಸಿರುವ ಕಾರ್ತಿಕ್, ಇದೀಗ ಮತ್ತೊಮ್ಮೆ ಟೀಂನಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
-
Dreams do come true 💙
— DK (@DineshKarthik) September 12, 2022 " class="align-text-top noRightClick twitterSection" data="
">Dreams do come true 💙
— DK (@DineshKarthik) September 12, 2022Dreams do come true 💙
— DK (@DineshKarthik) September 12, 2022
Asia Cup 2022: ಹಾರ್ದಿಕ್ ಆಟಕ್ಕೆ ತಲೆಬಾಗಿ ಮೆಚ್ಚುಗೆ ವ್ಯಕ್ತಪಡಿಸಿದ ದಿನೇಶ್ ಕಾರ್ತಿಕ್.. ವಿಡಿಯೋ ನೋಡಿ
ಐಸಿಸಿ ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಮೀಸಲು ಆಟಗಾರರು: ಮೊಹಮ್ಮದ್. ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್
ಈ ಹಿಂದೆ ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಅಬ್ಬರದಾಟ ಆಡಿದ್ದ ದಿನೇಶ್ ಕಾರ್ತಿಕ್ 34 ಎಸೆತಗಳಲ್ಲಿ ತಲಾ 5 ಬೌಂಡರಿ ಮತ್ತು ಸಿಕ್ಸರ್‌ಗಳಸಹಿತ ಅಜೇಯ 66 ರನ್ ಸಿಡಿಸಿ, ಪಂದ್ಯಶ್ರೇಷ್ಠ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದರು. ಈ ವೇಳೆ ಪ್ರಶ್ನೆ ಮಾಡಿದ್ದಾಗ ಟೀಂ ಇಂಡಿಯಾ ಪರ ಮತ್ತೊಮ್ಮೆ ಆಡಬೇಕೆಂಬುದು ನನ್ನ ದೊಡ್ಡ ಆಸೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಆಯ್ಕೆ ಸಹ ಮಾಡಲಾಗಿತ್ತು. 2022ರ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿದಿದ್ದರು.