ETV Bharat / sports

ಟಿ-20 ವಿಶ್ವಕಪ್: ಇಂಗ್ಲೆಂಡ್​ಗೆ ಮಾಡು ಇಲ್ಲವೇ ಮಡಿ ಪಂದ್ಯ, ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ

ಇಂಗ್ಲೆಂಡ್ ತಂಡಕ್ಕೆ ಇಂದಿನ ಪಂದ್ಯ ನಿರ್ಣಾಯಕವಾಗಿದ್ದು, ಸೆಮಿಫೈನಲ್ ಸ್ಥಾನ ಪಡೆಯಲು ಗೆಲ್ಲಲೇಬೇಕಾದ ಅನಿರ್ವಾಯತೆ ಇದೆ.

Sri Lanka vs England
ಇಂಗ್ಲೆಂಡ್ ಮತ್ತು ಶ್ರೀಲಂಕಾ ಪಂದ್ಯ
author img

By

Published : Nov 5, 2022, 1:35 PM IST

ಸಿಡ್ನಿ: ಟಿ20 ವಿಶ್ವಕಪ್​ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಸೆಮಿಫೈನಲ್​ಗೆ ಎಂಟ್ರಿ ಕೊಡಲು ಇಂಗ್ಲೆಂಡ್​ಗೆ ಈ ಪಂದ್ಯ ನಿರ್ಣಾಯಕವಾಗಿದ್ದು, ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.

ಇಂಗ್ಲೆಂಡ್ ಮೊದಲ ಗುಂಪಿನಲ್ಲಿ ಐದು ಅಂಕಗಳನ್ನು ಪಡೆದು 3ನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಗೆದ್ದರೆ ಏಳು ಅಂಕಗಳನ್ನು ಪಡೆದು ನಾಲ್ಕರಘಟ್ಟವನ್ನು ಪ್ರವೇಶಿಸಲಿದೆ. ಈ ಪಂದ್ಯವನ್ನು ಇಂಗ್ಲೆಂಡ್ ಕೈಚೆಲ್ಲಿದರೆ ಆಸ್ಟ್ರೇಲಿಯಾ ತಂಡಕ್ಕೆ ಸೆಮಿಫೈನಲ್ ಹಾದಿ ಸುಗಮವಾಗಲಿದೆ.

ಪಿಚ್ ವರದಿ: ಈ ಕ್ರಿಕೆಟ್ ಮೈದಾನದ ಪಿಚ್ ಅತ್ಯಂತ ಸಮತಟ್ಟಾದ ಟ್ರ್ಯಾಕ್‌ ಆಗಿದ್ದು, ಬ್ಯಾಟಿಂಗ್​ಗೆ ಹೆಚ್ಚು ಅನುಕೂಲವಾಗಲಿದೆ. ಹೀಗಾಗಿ ಪಂದ್ಯದಲ್ಲಿ ಹೆಚ್ಚು ರನ್ ಹರಿದು ಬರುವ ಸಾಧ್ಯತೆ ಇದೆ. ಈ ಮೈದಾನವು ಬೌಲರ್​ಗಳಿಗೆ ಅದರಲ್ಲೂ ವೇಗಿಗಳಿಗೆ ತಲೆನೋವಾಗಿದೆ.

ಆಟಗಾರರ ಸಂಭಾವ್ಯ ಪಟ್ಟಿ

ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್ ತಂಡದಲ್ಲಿ ಇರಲಿದ್ದಾರೆ.

ಶ್ರೀಲಂಕಾ: ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕಾ, ಭಾನುಕ ರಾಜಪಕ್ಸೆ, ವನಿಂದು ಹಸರಂಗ, ಮಹೇಶ್ ತೀಕ್ಷಣ, ಪ್ರಮೋದ್ ಮದುಶನ್, ಲಹಿರು ಕುಮಾರ, ಕಸುನ್ ರಜಿತ ತಂಡದಲ್ಲಿ ಇರಲಿದ್ದಾರೆ.

ಇದನ್ನೂ ಓದಿ:ಐಪಿಎಲ್ ಬೆಟ್ಟಿಂಗ್ ತನಿಖೆ ನಡೆಸಿದ ಐಪಿಎಸ್ ಅಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಧೋನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.