ಯುಕೆ(ಇಂಗ್ಲೆಂಡ್): ಭಾರತದ ವಿರುದ್ಧ ನಡೆದ ಮೂರು ಏಕದಿನ ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ಇಂಗ್ಲೆಂಡ್ ಟೆಸ್ಟ್ ಕ್ಯಾಪ್ಟನ್, ಆಲ್ರೌಂಡರ್ ಬೆನ್ಸ್ಟೋಕ್ಸ್ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಾಳೆ ನಡೆಯಲಿರುವ ಏಕದಿನ ಕ್ರಿಕೆಟ್ ಅವರ ಪಾಲಿಗೆ ಕೊನೆಯ ಪಂದ್ಯವಾಗಲಿದೆ. ಇದಾದ ಬಳಿಕ ಅವರು ಏಕದಿನ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಳ್ಳಲಿದ್ದಾರೆ.
ಜೋ ರೂಟ್ ರಾಜೀನಾಮೆಯಿಂದ ತೆರವಾಗಿದ್ದ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕನಾಗಿ ಕಳೆದ ಕೆಲ ತಿಂಗಳ ಹಿಂದೆ ಸ್ಟೋಕ್ಸ್ ನೇಮಕಗೊಂಡಿದ್ದಾರೆ. ಆದರೆ, ಇದೀಗ ದಿಢೀರ್ ಆಗಿ ಏಕದಿನ ಕ್ರಿಕೆಟ್ನಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. ಭಾರತದ ವಿರುದ್ಧ ನಡೆದ ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಬೆನ್ ಸ್ಟೋಕ್ಸ್ ಕೇವಲ 48ರನ್ಗಳಿಕೆ ಮಾಡಿದ್ದು, ಯಾವುದೇ ವಿಕೆಟ್ ಪಡೆದುಕೊಂಡಿಲ್ಲ.
31 ವರ್ಷದ ಬೆನ್ಸ್ಟೋಕ್ಸ್ 2019ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಅದರ ಫಲವಾಗಿ ತಂಡ ಏಕದಿನ ವಿಶ್ವಕಪ್ಗೆ ಮುತ್ತಿಕ್ಕಿತ್ತು. ಜೊತೆಗೆ ಸ್ಟೋಕ್ಸ್ ಪಂದ್ಯಶ್ರೇಷ್ಠ ಪ್ರಶಸ್ತಿ ಸಹ ಪಡೆದುಕೊಂಡಿದ್ದರು. ಇಂಗ್ಲೆಂಡ್ ಪರ 104 ಏಕದಿನ ಪಂದ್ಯಗಳನ್ನಾಡಿರುವ ಇವರು, 2919 ರನ್ಗಳಿಸಿದ್ದು, 74 ವಿಕೆಟ್ ಪಡೆದುಕೊಂಡಿದ್ದಾರೆ.
-
❤️🏴 pic.twitter.com/xTS5oNfN2j
— Ben Stokes (@benstokes38) July 18, 2022 " class="align-text-top noRightClick twitterSection" data="
">❤️🏴 pic.twitter.com/xTS5oNfN2j
— Ben Stokes (@benstokes38) July 18, 2022❤️🏴 pic.twitter.com/xTS5oNfN2j
— Ben Stokes (@benstokes38) July 18, 2022
ಟೆಸ್ಟ್, ಟಿ-20 ಕ್ರಿಕೆಟ್ನಲ್ಲಿ ಮುಂದುವರಿಕೆ: ಏಕದಿನ ಕ್ರಿಕೆಟ್ನಿಂದ ನಿವೃತ್ತಿ ಪಡೆದುಕೊಂಡಿರುವ ಸ್ಟೋಕ್ಸ್ ಇದೀಗ ಟೆಸ್ಟ್ ತಂಡದ ನಾಯಕನಾಗಿ ಮುಂದುವರೆಯಲಿದ್ದು, ಚುಟುಕು ಕ್ರಿಕೆಟ್ನಲ್ಲೂ ಭಾಗಿಯಾಗಲಿದ್ದಾರೆ.
ಡರ್ಹಾಮ್ನಲ್ಲಿ ಇಂಗ್ಲೆಂಡ್ ಪರ ಏಕದಿನ ಕ್ರಿಕೆಟ್ನ ಕೊನೆಯ ಪಂದ್ಯವನ್ನ ಆಡುತ್ತಿದ್ದೇನೆ. ನಾನು ಈ ಸ್ವರೂಪದ(ಏಕದಿನ ಕ್ರಿಕೆಟ್) ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಈ ನಿರ್ಧಾರ ಕೈಗೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಸಹ ಆಟಗಾರರೊಂದಿಗೆ ಇಂಗ್ಲೆಂಡ್ ಪರ ಆಡುವ ಪ್ರತಿ ಕ್ರಿಕೆಟ್ನ್ನು ಆನಂದಿಸಿದ್ದೇನೆ. ನನ್ನ ಪ್ರಯಾಣ ಸ್ಮರಣೀಯವಾಗಿತ್ತು ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಶೇ. 100ರಷ್ಟು ಪ್ರದರ್ಶನ ನೀಡಲು ನನ್ನಿಂದ ಸಾಧ್ಯವಾಗಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.