ETV Bharat / sports

ಭಾರತ - ಇಂಗ್ಲೆಂಡ್​ 2ನೇ ಏಕದಿನ: ಟಾಸ್​​ ಗೆದ್ದು ಫಿಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್

ಇಂದು ಎರಡನೇ ಪಂದ್ಯ ಆರಂಭವಾಗಿದ್ದು, ಮಹಾರಾಷ್ಟ್ರದ ಕ್ರಿಕೆಟ್​​​ ಸಂಸ್ಥೆಯ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಟಾಸ್​ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿದೆ.

ಟಾಸ್​​ ಗೆದ್ದು ಫಿಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್

author img

By

Published : Mar 26, 2021, 1:05 PM IST

Updated : Mar 26, 2021, 1:24 PM IST

ಪುಣೆ: ಪ್ರವಾಸಿ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಕ್ರಿಕೆಟ್​ ಸರಣಿಯ ಮೊದಲ ಪಂದ್ಯದಲ್ಲಿ ಗೆದ್ದು ಬಿಗಿರುವ ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲವು ಸಾಧಿಸುವ ಮೂಲಕ ಸರಣಿ ಕೈ ವಶ ಮಾಡಿಕೊಳ್ಳುವ ತವಕದಲ್ಲಿದ್ದರೆ, ಇತ್ತ ಇಂಗ್ಲೆಂಡ್​​ ತಂಡ ಕಮ್​​ಬ್ಯಾಕ್​ ಮಾಡಿ ಸರಣಿ ಉಳಿಸಿಕೊಳ್ಳಲು ಸಜ್ಜಾಗಿದೆ.

ಎರಡು ತಂಡಗಳಿಗೆ ಗಾಯದ ಸಮಸ್ಯೆ ಎದುರಾಗಿದ್ದು, ಟೀಮ್​ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​​ಮನ್​​ ಶ್ರೇಯಸ್​ ಅಯ್ಯರ್​ ಮೊದಲ ಪಂದ್ಯದಲ್ಲಿ ಗಾಯಗೊಂಡ ಪರಿಣಾಮ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇವರ ಸ್ಥಾನಕ್ಕೆ ಸೂರ್ಯ ಕುಮಾರ್​ ಯಾದವ್​​ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಇನ್ನು ಇಂಗ್ಲೆಂಡ್​ ತಂಡದ ನಾಯಕ ಇಯಾನ್​ ಮಾರ್ಗನ್​ ಕೂಡಾ ಮೊದಲ ಪಂದ್ಯದಲ್ಲಿ ಗಾಯಗೊಂಡಿದ್ದು, ಅವರು ಕೂಡಾ ಟೂರ್ನಿಯಿಂದ ಹೊರ ನಡೆದಿದ್ದಾರೆ.

ಇಂದು ಎರಡನೇ ಪಂದ್ಯ ಆರಂಭವಾಗಿದ್ದು, ಮಹಾರಾಷ್ಟ್ರದ ಕ್ರಿಕೆಟ್​​​ ಸಂಸ್ಥೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಟಾಸ್​ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡಿದೆ.

ಈಗಾಗಲೇ ವಿರಾಟ್​ ಕೊಹ್ಲಿ ನಾಯಕತ್ವದ ಟೀಮ್​ ಇಂಡಿಯಾ ಟೆಸ್ಟ್​ ಹಾಗೂ ಟಿ-20 ಸರಣಿ ಗೆದ್ದು ಬೀಗಿದ್ದು, ಏಕದಿನ ಸರಣಿ ಗೆಲ್ಲಲು ಸಜ್ಜಾಗಿದೆ. ಹಲವು ಬದಲಾವಣೆಯೊಂದಿಗೆ ಟೀಮ್​ ಇಂಡಿಯಾ ಹಾಗೂ ಆಂಗ್ಲ ಪಡೆ ಕಣಕ್ಕಿಳಿದಿವೆ.

ಓದಿ : ಕೊಹ್ಲಿ ಆರಂಭಿಕನಾಗಿ ಕಣಕ್ಕಿಳಿಯುವ ನಿರ್ಧಾರ ಪೂರ್ವನಿಯೋಜಿತ: ಮೈಕ್ ಹೆಸನ್

ಭಾರತ ತಂಡ : ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಶಿಖರ್ ಧವನ್, ರಿಷಭ್ ಪಂತ್, ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕೆ.ಎಲ್. ರಾಹುಲ್​, (ವಿಕೆಟ್ ಕೀಪರ್), ಪ್ರಸಿದ್ಧ್​ ಕೃಷ್ಣ, ಕುಲ್ದೀಪ್​​ ಯಾದವ್​, ಶಾರ್ದೂಲ್​ ಠಾಕೂರ್, ಭುವನೇಶ್ವರ್ ಕುಮಾರ್.

ಇಂಗ್ಲೆಂಡ್ ತಂಡ : ಜೋಸ್ ಬಟ್ಲರ್ (ನಾಯಕ), ಮೋಯಿನ್ ಅಲಿ, ಜಾನಿ ಬೈರ್‌ಸ್ಟೋವ್, ಸ್ಯಾಮ್ ಬಿಲ್ಲಿಂಗ್ಸ್, ಸ್ಯಾಮ್ ಕರ್ರನ್, ಟಾಮ್ ಕುರ್ರನ್, ಆದಿಲ್ ರಶೀದ್, ಜೇಸನ್ ರಾಯ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲೆ, ಲಿಯಾಮ್ ಲಿವಿಂಗ್ಸ್ಟೋನ್.

Last Updated : Mar 26, 2021, 1:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.